ಬಳ್ಳಾರಿಯ ಗಣಿಧಣಿಗಳು ಹಾಗೂ ಅಶೋಕ್ ಖೇಣಿ ಪಕ್ಷೇತರ ಶಾಸಕರ ಖರೀದಿಯಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಈ ಹಿನ್ನೆಲೆಯಲ್ಲಿ ಬಿಎಂಐಸಿ ಯೋಜನೆಗೆ ಹೆಚ್ಚುವರಿ ಭೂಮಿ ನೀಡಿದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಂಐಸಿ ಯೋಜನೆ ಅನುಷ್ಠಾನಕ್ಕೆ ಹಾತೊರೆಯುತ್ತಿರುವ ಬಿಜೆಪಿ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್ ತೀರ್ಪಿಗನುಗುಣವಾಗಿ ಹೆಜ್ಜೆ ಇಡಬೇಕು. ಇಲ್ಲವಾದರೆ ಅದಕ್ಕೆ ತಕ್ಕ ಬೆಲೆ ತರಬೇಕಾಗುತ್ತದೆ ಎಂದು ಹೇಳಿದರು.
ಶಾಸಕರ ಖರೀದಿಯಲ್ಲಿ ಮಹತ್ವದ ಪಾತ್ರ ವಹಿಸಿರುವ ಖೇಣಿಯವರು ಜೆಡಿಎಸ್ ನಾಯಕರನ್ನು ಬಿಟ್ಟರೆ ಉಳಿದಂತೆ ಎಲ್ಲ ಪಕ್ಷಗಳ ನಾಯಕರನ್ನು ಖರೀದಿ ಮಾಡಿದ್ದಾರೆ ಎಂದು ಅವರು ಇದೇ ಸಂದರ್ಭದಲ್ಲಿ ಆರೋಪಿಸಿದರು.
ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಹಿನ್ನಡೆಯಾಗಿದೆಯಾದರೂ, ತಮ್ಮ ಆತ್ಮಸ್ಥೈರ್ಯ ಕುಂದಿಲ್ಲ. ಜೂನ್ 15ರಂದು ನಡೆಯಲಿರುವ ಸಭೆಯಲ್ಲಿ ಪಕ್ಷ ಸಂಘಟನೆ ಕುರಿತಂತೆ ಚರ್ಚಿಸಲಾಗುವುದು ಎಂದು ಅವರು ತಿಳಿಸಿದರು.
|