ಹೆಗ್ಗಡೆದೇವಕೋಟೆಯಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ ಶಾಸಕ ಚಿಕ್ಕಣ್ಣ ಈಗ ತಮ್ಮ ಸ್ಥಾನ ಕಳೆದುಕೊಳ್ಳುವ ಭಯ ಎದುರಿಸುತ್ತಿದ್ದಾರೆ. ಚಿಕ್ಕಣ್ಣ ಅವರು ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ್ದ ಜಾತಿ ಪ್ರಮಾಣಪತ್ರ ಅಸಿಂಧು ಎಂದು ವಾದಿಸಿ ಬಿಎಸ್ಪಿ ಹೈಕೋರ್ಟ್ ಮೆಟ್ಟಿಲೇರಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ಪಿ ನಾಯಕ ಡಿಂಡಿಮ ಭೂಷಣ್, ಚಿಕ್ಕಣ್ಣ ಪರಿವಾರ ಬಂಟರು ಜನಾಂಗಕ್ಕೆ ಸೇರಿದವರಾಗಿದ್ದು, ಅವರು ಪರಿಶಿಷ್ಟ ಪಂಗಡ(ಎಸ್ಟಿ) ಎಂಬ ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂದರು.ಉಚ್ಚನ್ಯಾಯಾಲಯದಲ್ಲಿ ಆರೋಪ ಸಾಬೀತಾದರೆ ಚಿಕ್ಕಣ್ಣ ಅವರನ್ನು ಸ್ಥಾನದಿಂದ ವಜಾಗೊಳಿಸಿ, ಅವರು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಲಾಗುತ್ತದೆ.
ಚಿಕ್ಕಣ್ಣ ಕಲಿತ ಶಾಲೆ, ಕಾಲೇಜುಗಳಿಂದ ಅವರ ಜಾತಿ ಬಗ್ಗೆ ಮಾಹಿತಿ ಪಡೆದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಮುಂದಾಗಿದ್ದೇವೆ ಎಂದು ಭೂಷಣ್ ಹೇಳಿದರು. ಚಿಕ್ಕಣ್ಣ ಹಿಂದೆ ಜಿಲ್ಲಾ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿದ ಸಂದರ್ಭದಲ್ಲಿ ಸಲ್ಲಿಸಿದ ಪ್ರಮಾಣ ಪತ್ರಗಳ ಮಾಹಿತಿ ಕೊಡುವಂತೆ ಕೋರಿ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಲಾಗಿದೆ ಎಂದರು.
|