ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣವಚನ ಸ್ವೀಕರಿಸಲಿರುವ ಬಿ.ಎಸ್.ಯಡಿಯೂರಪ್ಪ ಧಾರ್ಮಿಕ ಕ್ಷೇತ್ರಗಳ ಯಾತ್ರೆಯಲ್ಲಿ ತೊಡಗಿದ್ದು, ನೂತನ ಸರ್ಕಾರಕ್ಕೆ ಯಾವುದೇ ವಿಘ್ನಗಳು ಬಾರದೇ ಯಶಸ್ವಿಯಾಗಿ ಐದು ವರ್ಷ ಪೂರೈಸಲಿ ಎಂದು ತಮ್ಮ ಕುಟುಂಬ ಸಮೇತ ಯಾತ್ರೆ ಹೊರಟಿದ್ದಾರೆ.
ತಮ್ಮ ಮನೆ ದೇವರಾದ ಯಡಿಯೂರು ಸಿದ್ಧಲಿಂಗೇಶ್ವರ ಸ್ವಾಮಿಗೆ ಮೊದಲ ಪೂಜೆ ಸಲ್ಲಿಸಿದ ಯಡಿಯೂರಪ್ಪ ಅಲ್ಲಿ ಕೆಲ ಹೊತ್ತು ಕಳೆದು ಸರ್ಕಾರ ಯಶಸ್ವಿಯಾಗಿ ಮುನ್ನಡೆಸುವಂತೆ ಪ್ರಾರ್ಥನೆ ಸಲ್ಲಿಸಿದರು. ಯಡಿಯೂರಪ್ಪ ಜೊತೆ ಶಾಸಕರಾದ ರೇಣುಕಾಚಾರ್ಯ ಸಿ.ಟಿ.ರವಿ ಕೂಡ ಯಾತ್ರೆಯಲ್ಲಿ ಭಾಗವಹಿಸಿದ್ದು, ಯಡಿಯೂರಿನಲ್ಲಿ ಪ್ರಾರ್ಥನೆ ಸಲ್ಲಿಸಿದ ಯಡಿಯೂರಪ್ಪ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆಯಲು ತೆರಳಿದ್ದಾರೆ. ಪಕ್ಷೇತರರ ಶಾಸಕರ ಬೆಂಬಲದೊಂದಿಗೆ ಸರ್ಕಾರ ನಡೆಸುವ ಜವಾಬ್ದಾರಿಯನ್ನು ಯಡಿಯೂರಪ್ಪ ಹೊತ್ತಿರುವುದರಿಂದ ಅವರು ಸಹಜವಾಗಿಯೇ ದೇವರ ಮೊರೆ ಹೋಗಬೇಕಾಗಿದೆ.
|