ಶುಕ್ರವಾರ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ವಿಧಾನಸೌಧವನ್ನು ಅತ್ಯಾಕರ್ಷಕವಾಗಿ ಸಿಂಗರಿಸಲಾಗಿದೆ. ವಿಧಾನಸೌಧಕ್ಕೆ ಈಗ ಮದುವಣಗಿತ್ತಿಯ ಕಳೆ.
ವಿಧಾನಸೌಧದ ಮುಂದೆ ಬೃಹತ್ ವೇದಿಕೆ ಸಜ್ಜಾಗಿದ್ದು, ಶುಕ್ರವಾರದ ಭದ್ರತೆಗಾಗಿ ವಿಧಾನಸೌಧದ ಸುತ್ತ 2000 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಮುನ್ನೆಚ್ಚರಿಕೆಗಾಗಿ ಶ್ವಾನದಳಗಳಿಂದ ತಪಾಸಣೆ ನಡೆಸಲಾಗುತ್ತಿದೆ.
ಅತಿಥಿಗಳಿಗೆ ಹಾಗೂ ಮುಖ್ಯ ಅತಿಥಿಗಳಿಗಾಗಿ ವಿಶೇಷ ಆಸನ ವ್ಯವಸ್ಥೆಯನ್ನು ಮಾಡಲಾಗಿದ್ದು, ಆಗಮಿಸುವ ಕಾರ್ಯಕರ್ತರಿಗೆ ಹಾಗೂ ಇತರರಿಗಾಗಿ 8000 ಸಾವಿರ ಆಸನದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ವಿಧಾನಸೌಧದ ಕೊಠಡಿಗಳಿಗೆ ಸುಣ್ಣ-ಬಣ್ಣ ಬಳಿಯಲಾಗುತ್ತಿದ್ದು, ಹೊಸ ಸಚಿವರಿಗಾಗಿ ಕರೋಲಾ ಕಾರು ಕೂಡಾ ಸಿದ್ಧವಾಗಿದೆ.
|