ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಸ್ವತಂತ್ರವಾಗಿ ಬಿಜೆಪಿ ಇಂದು ಅಧಿಕೃತವಾಗಿ ಅಧಿಕಾರದ ಗದ್ದುಗೆ ಏರಲು ಕ್ಷಣಗಣನೆ ಆರಂಭವಾಗಿರುವಂತೆಯೇ, ಉಪಮುಖ್ಯಮಂತ್ರಿ ಸ್ಥಾನ ಇಲ್ಲ ಎಂದು ನಿಯೋಜಿತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಅಲ್ಲದೆ, ಹಣಕಾಸು ಮತ್ತು ಅಬಕಾರಿ ಖಾತೆ ತಮ್ಮ ಬಳಿಯೇ ಇಟ್ಟುಕೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ, ಅತ್ಯಂತ ಪ್ರಮುಖವಾದ ಗೃಹ ಖಾತೆ ಪಡೆಯಲು ಪಕ್ಷದ ಹಿರಿಯ ಮುಖಂಡರಾದ ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್ ಹಾಗು ವಿಧಾನಸಭೆಗೆ ನೂತನವಾಗಿ ಆಯ್ಕೆಯಾಗಿರುವ ಗಣಿ ಧಣಿ ಕರುಣಾಕರ ರೆಡ್ಡಿ ಅವರ ನಡುವೆ ಪೈಪೋಟಿ ಆರಂಭವಾಗಿದೆ.
ಈ ಹಿನ್ನೆಲೆಯಲ್ಲಿ ಬಿಜೆಪಿ ಪಾಳಯದಲ್ಲಿ ಆಯ್ಕೆ ಕಸರತ್ತು ಮುಂದುವರಿದಿದ್ದು, ಯಾರೆಲ್ಲಾ ಶಾಸಕರು ಸಚಿವರಾಗುತ್ತಾರೆ ಎಂ ಬ ಬಗ್ಗೆ ಸಮಗ್ರ ಚಿತ್ರಣ ಇಂದು ಮಧ್ಯಾಹ್ನದ ಹೊತ್ತಿಗೆ ಹೊರಬೀಳುವ ಸಾಧ್ಯತೆ ಇದೆ.
|