ರಾಜ್ಯದಲ್ಲಿ ಇಂದು ಬಿಜೆಪಿ ಅಧಿಕಾರ ಹಿಡಿಯುವ ಮೂಲಕ ರಾಷ್ಟ್ರಪತಿ ಆಡಳಿತ ಕೊನೆಗೊಳ್ಳಲಿದೆ. ರಾಷ್ಟ್ರಪತಿ ಆಳ್ವಿಕೆಯ ಕಳೆದ ಆರು ತಿಂಗಳ ಸಾಧನೆ ಮತ್ತು ಪ್ರಗತಿಯ ಚಿತ್ರಣವನ್ನು ರಾಜ್ಯದ ಜನತೆಗೆ ಸದ್ಯದಲ್ಲೇ ಬಹಿರಂಗಪಡಿಸುವುದಾಗಿ ರಾಜ್ಯಪಾಲ ರಾಮೇಶ್ವರ್ ಠಾಕೂರ್ ತಿಳಿಸಿದ್ದಾರೆ.
ರಾಷ್ಟ್ರಪತಿ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಲು ಶ್ರಮಿಸಿದ್ದೇನೆ. ಕಳೆದ ಆರು ತಿಂಗಳಲ್ಲಿ ತಮ್ಮ ನೇತೃತ್ವದ ಸರ್ಕಾರ ಮಾಡಿದ ಸಾಧನೆಗಳ ಕುರಿತಾದ ಸಮಗ್ರ ವರದಿಯನ್ನು ರಾಷ್ಟ್ರಪತಿಗಳಿಗೆ ಸಲ್ಲಿಸುತ್ತೇನೆ. ಆ ಬಳಿಕ ರಾಜ್ಯದ ಜನತೆಗೂ ಈ ವಿವರ ಒದಗಿಸುತ್ತೇನೆ ಎಂದು ರಾಜ್ಯಪಾಲರು ತಿಳಿಸಿದ್ದಾರೆ.
ಕಳೆದ ಆರು ತಿಂಗಳಲ್ಲಿ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸುವ ಮೂಲಕ ರಾಜ್ಯದ ಪ್ರಗತಿಯನ್ನು ಕಾಯ್ದುಕೊಳ್ಳಲು ಸಹಕರಿಸಿದ್ದಾರೆ. ಶಾಂತಿಯುತವಾಗಿ ಚುನಾವಣೆ ನಡೆಸುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಅಲ್ಲದೆ, ಜನತಾದರ್ಶನದ ಮೂಲಕ ಸಮಸ್ಯೆಗಳ ಅರಿವಾಗಿದೆ. ಬಡವರ ಸಂಕಷ್ಟಕ್ಕೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ ತೃಪ್ತಿಯಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
|