ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಬಿ.ಎಸ್. ಯಡಿಯೂರಪ್ಪ, ಪ್ರಥಮ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದು, ರೈತರಿಗೆ ಶೇ. 3ರ ಬಡ್ಡಿದರದಲ್ಲಿ ಸಾಲ, ರೈತರಿಗೆ ಉಚಿತ ವಿದ್ಯುತ್ ಸೇರಿದಂತೆ ಪ್ರಣಾಳಿಕೆಯಲ್ಲಿ ತಿಳಿಸಿರುವ ಹಲವು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಪುನರುಚ್ಛರಿಸಿದ್ದಾರೆ.
ಪ್ರಣಾಳಿಕೆಯಲ್ಲಿ ತಿಳಿಸಿರುವ ಎಲ್ಲಾ ಅಂಶಗಳಿಗೆ ಸರ್ಕಾರ ಬದ್ಧವಾಗಿರುವುದಾಗಿ ತಿಳಿಸಿದ ಯಡಿಯೂರಪ್ಪ, ಮುಂದಿನ ತಿಂಗಳ 4,5, ಹಾಗೂ 6ರಂದು ವಿಶೇಷ ಅಧಿವೇಶನವನ್ನು ಕರೆಯಲಾಗುವುದು. ಮುಂದಿನ ತಿಂಗಳ 5ರಂದು ಸಭಾಪತಿಯವರ ಆಯ್ಕೆಯನ್ನು ಮಾಡಲಾಗುವುದು ಎಂದು ತಿಳಿಸಿದರು.
ಹೆಣ್ಣುಮಕ್ಕಳಿಗೆ ಪದವಿಯವರಿಗೆ ಉಚಿತ ಶಿಕ್ಷಣ ನೀಡಲಾಗುವುದು, ನೀರಾವರಿ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹಾಗೆಯೇ, ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರಕಿಸುವುದಕ್ಕಾಗಿ ಪ್ರಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಹೈನುಗಾರಿಕೆ ಉದ್ಯಮವನ್ನು ಮೇಲೆತ್ತುವ ನಿಟ್ಟಿನಲ್ಲಿ ಪ್ರತಿ ಲೀಟರ್ ಹಾಲಿಗೆ 2ರೂ. ನಷ್ಟು ಸಹಾಯಧನ ನೀಡಲಾಗುವುದು ಎಂದು ಅವರು ಘೋಷಿಸಿದರು.
|