ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಆನೇಕಲ್ ಶಾಸಕ ನಾರಾಯಣ ಸ್ವಾಮಿಯವರಿಗೆ ಸಚಿವ ಸ್ಥಾನ ನಿರಾಕರಿಸಿರುವುದನ್ನು ಖಂಡಿಸಿ ನಾರಾಯಣ ಸ್ವಾಮಿ ಬೆಂಬಲಿಗರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಇಂದು ಆನೆಕಲ್ ಬಂದ್‌ಗೆ ಕರೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು(ಶನಿವಾರ) ನಾರಾಯಣ ಸ್ವಾಮಿ ಬೆಂಬಲಿಗರು ಆನೇಕಲ್ ಬಂದ್‌ಗೆ ಕರೆ ನೀಡಿದ್ದಾರೆ. ಅಲ್ಲದೆ, ಪುರಸಭೆ ಅಧ್ಯಕ್ಷರು ಸೇರಿದಂತೆ 15 ಬಿಜೆಪಿ ಸದಸ್ಯರು, 4 ಜಿಲ್ಲಾ ಪಂಚಾಯತ್ ಸದಸ್ಯರು, 4 ಎಪಿಎಂಸಿ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ.
ಈ ಮಧ್ಯೆ ಜಗದೀಶ್ ಶೆಟ್ಟರ್ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಕಾರಣಕ್ಕೆ ಅವರ ಬೆಂಬಲಿಗರು ತೀವ್ರ ಅಸಮಾಧಾನಗೊಂಡಿದ್ದಾರೆ. ಅಲ್ಲದೆ, ಹುಬ್ಬಳ್ಳಿ-ಬಿಜಾಪುರ ಹೆದ್ದಾರಿ ಬಂದ್ ಮಾಡಲಾಗಿದೆ. ಗದಗ, ಕೊಪ್ಪಳ ಹಾಗೂ ಬೆಂಗಳೂರಿನಲ್ಲಿಯೂ ಶೆಟ್ಟರ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.
|