ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮು.ಮಂತ್ರಿ ಪ್ರ. ಕಾರ್ಯದರ್ಶಿಯಾಗಿ ಬಳಿಗಾರ್  Search similar articles
ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ವಿ.ಪಿ. ಬಳಿಗಾರ್ ಅವರನ್ನು ಪುನಃ ನೇಮಕ ಮಾಡಲಾಗಿದೆ. ಅಲ್ಲದೆ, ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ನೇಮಕವಾಗಬೇಕಾದ ಅಧಿಕಾರಿಗಳ ಪಟ್ಟಿಯೂ ಬಹುತೇಕ ಪೂರ್ಣಗೊಂಡಿದೆ.

ಈ ಹಿಂದೆ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಯಡಿಯೂರಪ್ಪನವರು ಏಳು ದಿನಗಳ ಕಾಲ ಮುಖ್ಯಮಂತ್ರಿ ಎಂದು ಕಾರ್ಯನಿರ್ವಹಿಸಿದ ಸಂದರ್ಭದಲ್ಲಿ ಬಳಿಗಾರ್ ಅವರೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದರು. ಆದರೆ ರಾಷ್ಟ್ರಪತಿ ಆಡಳಿತಾವಧಿಯ ಸಂದರ್ಭದಲ್ಲಿ ರಾಜ್ಯಪಾಲರು ಬಳಿಗಾರ್ ಅವರನ್ನು ಕೈ ಬಿಟ್ಟು, ಸುಧಾಕರ್ ರಾವ್ ಅವರನ್ನು ನೇಮಕ ಮಾಡಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಬಳಿಗಾರ್ ಈಗ ಮತ್ತೆ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿ ದಯಾಶಂಕರ್ ಅವರು ನೇಮಕವಾಗಲಿದ್ದರೆ, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಾಗಿ ಐಎಎಸ್ ಅಧಿಕಾರಿಗಳಾದ ಸಾರಿಗೆ ಆಯುಕ್ತ ಲಕ್ಷ್ಮೀ ನಾರಾಯಣ ಮತ್ತು ಬಾಗಲಕೋಟೆ ಜಿಲ್ಲಾಧಿಕಾರಿ ಬಿ.ಜಿ ನಂದಕುಮಾರ್ ನೇಮಕವಾಗುವ ಸಾಧ್ಯತೆಗಳಿವೆ.
ಮತ್ತಷ್ಟು
ಮೊದಲು ಬಹುಮತ ನಂತರ ಜಂಟಿ ಅಧಿವೇಶನ
ನಾರಾಯಣ ಸ್ವಾಮಿ ಬೆಂಬಲಿಗರ ಪ್ರತಿಭಟನೆ
ಮತದಾನದ ವೇಳೆ ಬಾಂಬ್ ಸ್ಪೋಟಕ್ಕೆ ಸಂಚು
ಗ್ಯಾಸ್ ಸಿಲಿಂಡರ್ ಬಳಸಿ ಸ್ಫೋಟದ ಸಂಚು ಹೂಡಿದ್ದ ಉಗ್ರರು
ಮುನಿಸಿಕೊಂಡ ಹಿರಿಯ ಶಾಸಕ ಶಂಕರಲಿಂಗೇಗೌಡ
ಬಿಜೆಪಿ ಸರಕಾರಕ್ಕೆ ಜೂ.6ರಂದು ಅಗ್ನಿ ಪರೀಕ್ಷೆ