ರಸಗೊಬ್ಬರ ಹಾಗೂ ಬಿತ್ತನೆ ಬೀಜ ವಿತರಣೆಗೆ ಆಗ್ರಹಿಸಿದ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನಾಕಾರರು ಬಸ್‌ಗಳ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿದ್ದು, ಪೊಲೀಸರು ರೈತರ ಮೇಲೆ ಲಾಠಿ ಪ್ರಹಾರ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ ರೈತರು ಉಗ್ರ ಪ್ರತಿಭಟನೆ ಮುಂದುವರೆಸಿದ್ದಾರೆ.
ಗೋಡಾನಿನಲ್ಲಿ ಬಿತ್ತನೆ ಬೀಜ ಶೇಖರಣೆಯಾಗಿದ್ದರೂ, ರೈತರಿಗೆ ನೀಡದೆ ಅನ್ಯಾಯ ಮಾಡುತ್ತಿದ್ದಾರೆ ಎಂಬುದು ರೈತರ ಆರೋಪವಾಗಿದೆ. ಈ ನಿಟ್ಟಿನಲ್ಲಿ ಪರೀಶೀಲನೆ ನಡೆಸಲು ಸ್ಥಳಕ್ಕೆ ಅಧಿಕಾರಿಗಳು ಬೇಟಿ ನೀಡಿದ್ದಾರೆ.
ಕಳೆದ ನಾಲ್ಕೈದು ವರ್ಷಗಳಿಂದ ರೈತರು ಬಿತ್ತನೆ ಬೀಜಕ್ಕಾಗಿ ಪ್ರತಿಭಟನೆ ನಡೆಸುತ್ತಲೇ ಬಂದಿದ್ದಾರೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ರೈತರಿಗೆ ರಸಗೊಬ್ಬರ, ಬಿತ್ತನೆ ಬೀಜ ಸಿಗುತ್ತಿಲ್ಲ ಎಂಬುದು ರೈತರ ಆರೋಪವಾಗಿದೆ.
|