ಬಿಜೆಪಿ ನಾಯಕರಿಗೆ ತಲೆನೋವಾಗಿದ್ದ ಜಗದೀಶ್ ಶೆಟ್ಟರ್ ಅವರ ಸ್ಪೀಕರ್ ಸ್ಥಾನ ವಿವಾದ ಕೊನೆಗೂ ಸುಖಾಂತ್ಯ ಕಂಡಿದೆ. ಸ್ಪೀಕರ್ ಸ್ಥಾನವನ್ನು ಒಪ್ಪಿಕೊಳ್ಳಬೇಕೆಂಬ ಬಿಜೆಪಿ ವರಿಷ್ಠರ ತೀರ್ಮಾನಕ್ಕೆ ಶೆಟ್ಟರ್ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಮೂಲಕ ಪಕ್ಷದ ಆಂತರಿಕ ಬಿಕಟ್ಟು ಸ್ವಲ್ಪ ಮಟ್ಟಿಗೆ ತಣ್ಣಗಾಗಿದೆ. ಈ ಸಂಬಂಧ ಇಂದು ನಗರದಲ್ಲಿ ಪಕ್ಷದ ನಾಯಕರಿಂದ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆಗಳಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್, ನನ್ನ ಭಾವನೆಗಳನ್ನು ಪಕ್ಷದ ರಾಷ್ಟ್ರೀಯ ನಾಯಕರ ಜೊತೆ ಹಂಚಿಕೊಂಡಿದ್ದೇನೆ. ಅವರು ನೀಡುವ ತೀರ್ಮಾನಕ್ಕೆ ಬದ್ದನಾಗಿರುತ್ತೇನೆ ಎಂದು ತಿಳಿಸಿದ್ದಾರೆ.
ಕಳೆದ ರಾತ್ರಿಯಷ್ಟೇ ನವದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿರುವ ಜಗದೀಶ್ ಶೆಟ್ಟರ್‌ಗೆ ನಾಯಕರು ಸಮಾಧಾನದ ಮಾತುಗಳನ್ನಾಡಿದ್ದಾರೆ. ಅಲ್ಲದೆ, ನಿಮ್ಮ ಭಾಗದಲ್ಲಿ ಯಾವ ಅಭಿವೃದ್ದಿ ಕೆಲಸವಾದರೂ ಸರಿ, ಮಾಡಿಸಿ, ಅದಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಜಗದೀಶ್ ಶೆಟ್ಟರ್ ಸ್ಪೀಕರ್ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
|