ಅಕಾಲಿಕ ಮಳೆಯಿಂದಾಗಿ ಉದ್ಯಾನನಗರಿಯಲ್ಲಿ ಆಗಿರುವ ಹಾನಿ ಕುರಿತು ವಿಶ್ಲೇಷಿಸಲು ಇಂದು ಅಧಿಕಾರಿಗಳ ಹಾಗೂ ಶಾಸಕರ ತುರ್ತು ಸಭೆ ನಡೆಸಲಾಯಿತು.
ಇಂದು ಬೆಳಿಗ್ಗೆ ನಡೆದ ತುರ್ತು ಸಭೆಯಲ್ಲಿ ಮಳೆ ಪರಿಹಾರ ಕಾಮಗಾರಿಗೆ ಚಾಲನೆ ನೀಡುವಂತೆ ಸಭೆಯಲ್ಲಿ ನಿರ್ಣಯಿಸಲಾಯಿತು. ಅಲ್ಲದೆ, ನಗರದಲ್ಲಿನ ಚರಂಡಿ ವ್ಯವಸ್ಥೆ, ತಾಜ್ಯವಸ್ತುಗಳ ವಿಲೇವಾರಿ ಸೇರಿದಂತೆ ಹಲವು ವಿಷಯಗಳು ಸಭೆಯಲ್ಲಿ ಚರ್ಚೆಗೆ ಬಂದವು.
ಆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯಡಿಯೂರಪ್ಪ, ತ್ಯಾಜ್ಯವಸ್ತುಗಳ ವಿಲೇವಾರಿ ಸೂಕ್ತ ಸಮಯದಲ್ಲಿ ಮಾಡದಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಮಳೆ ಹಾನಿ ಕುರಿತು ಚರ್ಚೆ ನಡೆಸಲು ಇಂದು ಸಂಜೆ ಸಚಿವ ಸಂಪುಟ ಕರೆಯಲಾಗಿದೆ ಎಂದು ತಿಳಿಸಿದರು.
ಪ್ರಧಾನಿ ಭರವಸೆ ಇದೇ ಸಂದರ್ಭದಲ್ಲಿ ತಮ್ಮ ದೆಹಲಿ ಭೇಟಿಯ ಕುರಿತು ಮಾಹಿತಿ ನೀಡಿದ ಅವರು, ಕರ್ನಾಟಕದ ಸಂಪೂರ್ಣ ಅಭಿವೃದ್ದಿಗೆ ಸಹಕಾರ ನೀಡುವುದಾಗಿ ಪ್ರಧಾನಿ ಮನಮೋಹನ್ ಸಿಂಗ್ ಭರವಸೆ ನೀಡಿದ್ದಾರೆ. ಈ ಮೂಲಕ ರಾಜ್ಯದ ಅಭಿವೃದ್ದಿಗೆ ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ರಾಜ್ಯದಲ್ಲಿನ ರಸಗೊಬ್ಬರ ಬಿತ್ತನೆ ಬೀಜ ಹಾಗೂ ಕೀಟನಾಶಕಗಳ ಕೊರತೆ ಕಂಡು ಬಂದಿದೆ. ಈ ನಿಟ್ಟಿನಲ್ಲಿ ಇವೆಲ್ಲವನ್ನು ಶೀಘ್ರವೇ ಪೂರೈಸುವಂತೆ ಪ್ರಧಾನಿಮಂತ್ರಿಯವರಿಗೆ ಶೀಘ್ರದಲ್ಲಿ ಪತ್ರ ಬರೆಯುವುದಾಗಿ ಅವರು ತಿಳಿಸಿದರು.
|