ನೂತನ ಸರಕಾರದಲ್ಲಿ ಸಚಿವರಾಗಿ ಆಯ್ಕೆಯಾಗಿರುವ ಕರುಣಾಕರ ರೆಡ್ಡಿ ಅವರು ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ರೆಡ್ಡಿ ಅವರು ಮಂಗಳವಾರ ದೆಹಲಿಗೆ ತೆರಳಿ ಲೋಕಸಭಾಧ್ಯಕ್ಷರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹರಪನಹಳ್ಳಿ ಕ್ಷೇತ್ರದಿಂದ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ವಿರುದ್ಧ ಗೆಲುವು ಸಾಧಿಸಿದ್ದರು.
ನಗರಕ್ಕೆ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ಖಾತೆ ನೀಡಬೇಕೆಂದು ಪಕ್ಷದ ನಾಯಕರಲ್ಲಿ ತಾವು ಯಾವತ್ತೂ ಕೇಳಿಕೊಂಡಿಲ್ಲ. ಈ ಬಗ್ಗೆ ವಿನಾ ಕಾರಣ ಆರೋಪ ಹೊರಿಸಲಾಗುತ್ತಿದೆ. ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿಭಾಯಿಸುವುದಾಗಿ ತಿಳಿಸಿದರು.
ಪಕ್ಷ ತೀರ್ಮಾನಿಸಿರುವ ಸಚಿವ ಪದವಿಯನ್ನು ಸ್ವೀಕರಿಸಲು ಸಿದ್ದನಿದ್ದೇನೆ. ಆ ಮೂಲಕ ತನ್ನ ಕ್ಷೇತ್ರಕ್ಕೆ ಹಾಗೂ ಜನತೆಗೆ ಉತ್ತಮ ಸಹಕಾರ ನೀಡುವುದಾಗಿ ಅವರು ತಿಳಿಸಿದರು.
|