ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಸಗೊಬ್ಬರ ಅಭಾವಕ್ಕೆ ಕೇಂದ್ರ ಕಾರಣ: ಸಿಎಂ  Search similar articles
PTI
ಕೇಂದ್ರ ಸರ್ಕಾರ ಸಬ್ಸಿಡಿ ನೀಡದಿರುವುದೇ ರಸಗೊಬ್ಬರ ಹಾಗೂ ಬಿತ್ತನೆ ಬೀಜದ ಅಭಾವಕ್ಕೆ ಕಾರಣವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿಂದು ಕೃಷಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡುತ್ತಿದ್ದರು. ರಸಗೊಬ್ಬರ, ಬಿತ್ತನೆ ಬೀಜಕ್ಕೆ ಶೇ.50ರಷ್ಟು ಸಹಾಯ ಧನ ಘೋಷಿಸಬೇಕೆಂದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು. ಈ ನಿಟ್ಟಿನಲ್ಲಿ ಇನ್ನೆರಡು ದಿನಗಳಲ್ಲಿ ಅಧಿಕಾರಿಗಳ ತಂಡ ದೆಹಲಿಗೆ ತೆರಳಲಿದ್ದು, ಪ್ರಧಾನಿಯವರಿಗೆ ಪತ್ರ ಬರೆಯಲಾಗುವುದು ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಅಕ್ರಮ ರಸಗೊಬ್ಬರ ದಸ್ತಾನು ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು, ಅನಗತ್ಯ ರಸಗೊಬ್ಬರ ದಾಸ್ತಾನಿಗೆ ರಾಜ್ಯದಲ್ಲಿ ನಿಷೇಧ ಹೇರಲಾಗಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿವಾದದ ಕುರಿತು ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು ಸಭಾಧ್ಯಕ್ಷ ಸ್ಥಾನಕ್ಕೆ ಒಪ್ಪಿಗೆ ನೀಡಿದ್ದಾರೆ. ಅಲ್ಲದೆ, ಇದೇ ತಿಂಗಳ ಆರರಂದು ನಡೆಯುವ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
ಮತ್ತಷ್ಟು
ಹಾಡುಹಗಲೇ ಮಹಿಳಾ ಉದ್ಯೋಗಿ ಕೊಲೆ ಯತ್ನ
ಕರುಣಾಕರ ರೆಡ್ಡಿ ಸಂಸತ್ ಸ್ಥಾನಕ್ಕೆ ರಾಜೀನಾಮೆ
ಮಳೆ ಹಾನಿ: ಸಚಿವ ಸಂಪುಟ ಸಭೆ
ಜಂಟಿ ಅಧಿವೇಶನ ಭಾಷಣ: ಠಾಕೂರ್ ಸಮ್ಮತಿ
ಸ್ಪೀಕರ್ ಸ್ಥಾನಕ್ಕೆ ಶಿರ ಭಾಗಿದ ಶೆಟ್ಟರ್
ಬಿಎಸ್‍‌ವೈಗೆ ಠಾಕೂರ್ ಬುಲಾವ್