ಜಂಟಿ ಅಧಿವೇಶನಕ್ಕೂ ಮೊದಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು (ಬುಧವಾರ) ಮಾಜಿ ಪ್ರಧಾನಿ ದೇವೇಗೌಡರನ್ನು ಬೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.
ಇಂದು ಬೆಳಿಗ್ಗೆ ದೇವೇಗೌಡರ ನಿವಾಸಕ್ಕೆ ತೆರಳಿದ ಯಡಿಯೂರಪ್ಪ, ಇದೊಂದು ಸೌಹಾರ್ದಯುತ ಭೇಟಿಯಾಗಿದೆ ಎಂದು ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ದೇವೇಗೌಡರು ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದೇವೇಗೌಡರು ರೈತರ ಹೆಸರಿನಲ್ಲಿ ಯಡಿಯೂರಪ್ಪನವರು ಪ್ರಮಾಣ ವಚನ ಸ್ವೀಕರಿಸಿರುವುದು ಅತ್ಯಂತ ಸಂತೋಷ ತಂದಿದೆ. ಈ ಮೂಲಕ ಯಡಿಯೂರಪ್ಪನವರಿಗೆ ರೈತರ ಬಗ್ಗೆ ಕಾಳಜಿ ಇದೆ ಎಂಬುದು ತಿಳಿಯುತ್ತದೆ ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು. ನೂತನ ಸರ್ಕಾರದ ಅಭಿವೃದ್ದಿಗೆ ತಮ್ಮ ಬೆಂಬಲವಿದೆ ಎಂದು ಕುಮಾರಸ್ವಾಮಿಯವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
|