ಕೋಲಾರ, ಬೆಂಗಳೂರು ಮತ್ತು ತಮಿಳುನಾಡಿನ ಕೃಷ್ಣಗಿರಿಯಲ್ಲಿ ನೂರಾರು ಜನರನ್ನು ಇತ್ತೀಚೆಗೆ ಬಲಿ ತೆಗೆದುಕೊಂಡ ಕಳ್ಳಭಟ್ಟಿ ದುರಂತ ಪ್ರಕರಣದ ಪ್ರಮುಖ ಆರೋಪಿ ಭಟ್ಟಿ ಇಕ್ಬಾಲ್‌ನನ್ನು ಬಂಧಿಸುವಲ್ಲಿ ನಗರದ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಹತ್ವದ ಸುಳಿವಿನ ಆಧಾರದ ಮೇಲೆ ಕಾರ್ಯಾಚರಣೆಗಿಳಿದ ಸಿಸಿಬಿ ಪೊಲೀಸರು ಜೆಡಿಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಈತ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೃಷ್ಣಗಿರಿ ಕಡೆಗಳಿಗೆ ಕಳ್ಳಭಟ್ಟಿ ಸರಬರಾಜು ಮಾಡುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.
ಅಲ್ಲದೆ, ಈ ಹಿಂದೆ ಬಂಧಿಸಲಾಗಿರುವ ನಾಲ್ವರು ಆರೋಪಿಗಳು ಮಿಥೈಲ್ ಎಂಬ ರಾಸಾಯನಿಕವನ್ನು ಈತನಿಗೆ ಪೂರೈಕೆ ಮಾಡುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ರಾಜ್ಯದ ವಿವಿಧೆಡೆ ಹಾಗೂ ತಮಿಳುನಾಡಿನಲ್ಲಿ ಕಳ್ಳಭಟ್ಟಿ ದುರಂತದಿಂದ 150ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
|