ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ವಿಧಾನಪರಿಷತ್ ಅಭ್ಯರ್ಥಿಗಳ ಘೋಷಣೆ  Search similar articles
ರಾಜ್ಯ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಜೂನ್. 26ರಂದು ನಡೆಯಲಿರುವ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷವು ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಆಗ್ನೇಯ ಪದವೀಧರ ಕ್ಷೇತ್ರದಿಂದ ಡಾ| ಎ.ಎಚ್. ಶಿವಯೋಗಿ ಸ್ವಾಮಿ, ಪಶ್ಚಿಮ ಪದವೀಧರ ಕ್ಷೇತ್ರದಿಂದ ಮೋಹನ್ ಎ. ಲಿಂಬೀಕಾಯಿ, ಈಶಾನ್ಯ ಪದವೀಧರ ಕ್ಷೇತ್ರದಿಂದ ಶಶಿಲ್ ಜಿ. ನಮೋಶಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎಂ. ನೀಲಯ್ಯ ಸ್ಪರ್ಧಿಸಲಿದ್ದಾರೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ಈ ಅಭ್ಯರ್ಥಿಗಳ ಪೈಕಿ ಶಶಿಲ್ ನಮೋಶಿ ಈಗಾಗಲೇ ಎರಡು ಬಾರಿ ಆಯ್ಕೆಯಾಗಿದ್ದು, ಇದೀಗ ಹ್ಯಾಟ್ರಿಕ್ ಸಾಧನೆಗೆ ಮುಂದಾಗಿದ್ದಾರೆ.

ಈ ಮಧ್ಯೆ ಜೆಡಿಎಸ್ ಕೂಡ ವಿಧಾನ ಪರಿಷತ್ತಿನ ಚುನಾವಣೆಗೆ ಮೂವರು ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಈ ಹಿಂದೆ ಜಯಗಳಿಸಿದ್ದ ಪುಟ್ಟಣ್ಣ, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಎಚ್.ಎಸ್. ಶಿವಶಂಕರ್ ಮತ್ತು ಪಶ್ಚಿಮ ಪದವೀಧರ ಕ್ಷೇತ್ರದಿಂದ ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಮಾಜಿ ಮೇಯರ್ ಎಚ್.ವಿ. ಡಂಬಳ ಅವರನ್ನು ಕಣಕ್ಕಿಳಿಸಲಿ ಜೆಡಿಎಸ್ ನಿರ್ಧರಿಸಿದೆ.
ಮತ್ತಷ್ಟು
ಸಾರಿಗೆ ಸಂಸ್ಥೆ ಬಸ್‌ದರ ಹೆಚ್ಚಳ
ರಾಷ್ಟ್ರಪತಿ ಆಡಳಿತಕ್ಕೆ ಅಧಿಕೃತ ತೆರೆ
ತೈಲ ಬೆಲೆ ಏರಿಕೆಗೆ ಯಡಿಯೂರ್ ಖಂಡನೆ
ಕಳ್ಳಭಟ್ಟಿ: ಭಟ್ಟಿ ಇಕ್ಬಾಲ್ ಬಂಧನ
ಸ್ಪೀಕರ್ ಸ್ಥಾನಕ್ಕೆ ಕಾಂಗ್ರೆಸ್ ಸ್ಪರ್ಧೆ ಇಲ್ಲ: ಖರ್ಗೆ
ಸ್ಪೀಕರ್ ಸ್ಥಾನಕ್ಕೆ ಜೆಡಿಎಸ್ ಸ್ಪರ್ಧೆ ಇಲ್ಲ