ಹದಿಮೂರನೆ ವಿಧಾನಸಭೆಯ ನೂತನ ಸಭಾಧ್ಯಕ್ಷರಾಗಿ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕರ್ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ಅವರೊಬ್ಬರೆ ನಾಮಪತ್ರ ಸಲ್ಲಿಸಿರುವುದರಿಂದ ಧ್ವನಿಮತದ ಮೂಲಕ ಆರಿಸಲಾಯಿತು. ಈ ಸಂದರ್ಭದಲ್ಲಿ ವಿಧಾನಸಭೆಯ ಸಚಿವರು, ಶಾಸಕರು ನೂತನ ಸಭಾಧ್ಯಕ್ಷರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಜಗದೀಶ್ ಶೆಟ್ವರ್ ಅವರಿಗೆ ದೊರೆತಿರುವ ಸಭಾಧ್ಯಕ್ಷ ಸ್ಥಾನವನ್ನು ನಿಷ್ಠೆಯಿಂದ ನಿಭಾಯಿಸುವ ಶಕ್ತಿ ಅವರಿಗೆ ಎಂದು ಹಾರೈಸಿದರು.
ಕಳೆದ ಕೆಲವು ದಿನಗಳ ಹಿಂದೆ ಸ್ಪೀಕರ್ ಸ್ಥಾನವನ್ನು ನಿರಾಕರಿಸಿದ್ದ ಶೆಟ್ಟರ್ ಅವರನ್ನು ಪಕ್ಷದ ರಾಷ್ಟ್ರೀಯ ನಾಯಕರು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು.
|