ಶನಿವಾರ ನಡೆಯಲಿರುವ ಸಚಿವ ಸಂಪುಟದ ವಿಸ್ತರಣೆಯಲ್ಲಿ ಬಿಜೆಪಿಯ ಶಾಸಕ ಕಟ್ಟಾ ಸುಬ್ರಮಣ್ಯ ನಾಯ್ದು ಅವರಿಗೆ ಸಚಿವಸ್ಥಾನ ದೊರೆಯುವುದು ಖಚಿತವಾಗಿದೆ. ಅಂದು ರಾಜಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ನೂತನ ಸಚಿವರ ಸ್ಥಾನ ಹಂಚಿಕೆ ನಾಳೆ ಸಂಜೆಯೊಳಗೆ ಪೂರ್ಣಗೊಳ್ಳಲಿದ್ದು, ಖಾತೆ ಹಂಚಿಕೆ ಕುರಿತು ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಅವರು ತಿಳಿಸಿದರು.
ನಗರದಲ್ಲಿ ಇಂದು (ಗುರುವಾರ) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭೆಯ ಉಪಾ ಸಭಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯೂ ಸ್ಪರ್ಧಿಸಲಿದ್ದು, ಶೃಂಗೇರಿ ಶಾಸಕ ಡಿ.ಎನ್. ಜೇವರಾಜ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ್ದ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಕಟ್ಟಾ ಸುಬ್ರಮಣ್ಯ ನಾಯ್ಡು ಅವರು ವಿಧಾನಸಭೆಯ ಉಪ ಸಭಾಧ್ಯಕ್ಷನ ಸ್ಥಾನಕ್ಕೆ ಶೃಂಗೇರಿ ಶಾಸಕ ಡಿ.ಎನ್.ಜೇವರಾಜ್‌ರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ನೂತನ ಸರ್ಕಾರವು ಈ ತಿಂಗಳ 23ರಂದು ಮೂರು ದಿನಗಳ ಕಾಲ ಅಧಿವೇಶನ ನಡೆಸಲಿದೆ. ಹಾಗೆಯೇ ಜುಲೈ 10ರಂದು 2008-09ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುವ ತೀರ್ಮಾನವನ್ನು ಸಚಿವ ಸಂಪುಟ ತೆಗೆದುಕೊಂಡಿದೆ.
|