ಕಬ್ಬು ಬೆಳೆಗೆ ಸೂಕ್ತ ಬೆಂಬಲ ಬೆಲೆ ದೊರಕಿಲ್ಲವೆಂದು ವಿಧಾನಸಭಾ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಭಾಷಣಕ್ಕೆ ವಿಪಕ್ಷ ಸದಸ್ಯರು ಅಡ್ಡಿ ಪಡಿಸಿದರು.
ರಾಜ್ಯದಲ್ಲಿ ಕಬ್ಬಿಗೆ ಬೆಂಬಲ ಬೆಲೆ ಘೋಷಿಸಬೇಕೆಂದು ಆಗ್ರಹಿಸಿ ಜೆಡಿಎಸ್ ಸದಸ್ಯರು ರಾಜ್ಯಪಾಲರ ಭಾಷಣ ಪ್ರಾರಂಭವಾಗುತ್ತಿದ್ದಂತೆ ಗದ್ದಲ ನಡೆಸಿದರು.
ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಸದನದಲ್ಲಿ ಪ್ರತಿಭಟನೆ ನಡೆಸಿದರು. ರೈತರಿಗೆ ದೊರಯಬೇಕಾದ ರಸಗೊಬ್ಬರ ಹಾಗೂ ಕಬ್ಬಿನ ಸಮಸ್ಯೆಗಳಿಗೆ ಪರಿಹಾರ ನೀಡಿದ ಬಳಿಕ ಭಾಷಣ ಮುಂದುವರೆಸುವಂತೆ ವಿಪಕ್ಷ ನಾಯಕರು ರಾಜ್ಯಪಾಲರಿಗೆ ಒತ್ತಾಯಿಸಿದರು.
ರಾಜ್ಯಪಾಲರ ಭಾಷಣದಲ್ಲಿ ಹುರುಳಿಲ್ಲ
ರಾಜ್ಯಪಾಲರ ಭಾಷಣದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ರಾಜ್ಯಪಾಲರ ಭಾಷಣದಲ್ಲಿ ಯಾವುದೇ ಅಭಿವೃದ್ದಿ ಕಾರ್ಯಕ್ರಮಗಳ ಬಗ್ಗೆ ಪ್ರಸ್ತಾಪನೆ ಇಲ್ಲ ಎಂದು ತಿಳಿಸಿದ್ದಾರೆ. ರೈತರ ಜ್ವಲಂತ ಸಮಸ್ಯೆಗಳಿಗೆ ರಾಜ್ಯಪಾಲರ 14 ಪುಟಗಳ ಭಾಷಣದಲ್ಲಿ ಎಲ್ಲಿಯೂ ಉಲ್ಲೇಖವೇ ಇಲ್ಲದಿರುವುದು ವಿಷಾದನೀಯ ಎಂದು ಅವರು ಭಾಷಣವನ್ನು ಟೀಕಿಸಿದರು.
|