ಬೆಂಗಳೂರು: ವಿಧಾನಸಭೆಯಲ್ಲಿ ಯಡಿಯೂರಪ್ಪ ವಿಶ್ವಾಸಮತ ಯಾಚನೆಗೂ ಮೊದಲು ಚರ್ಚೆ ನಡೆಸುವಂತೆ ಆಗ್ರಹಿಸಿದ ವಿರೋಧ ಪಕ್ಷದ ನಾಯಕರ ಆಣತಿಯಂತೆ ಸಭಾಧ್ಯಕ್ಷರು ಎರಡು ಗಂಟೆಗಳ ಕಾಲ ಅನುಮತಿ ನೀಡಿದರು.
ಈ ಸಂದರ್ಭದಲ್ಲಿ ತೈಲದ ಮೇಲಿನ ಸುಂಕವನ್ನು ಕಡಿತಗೊಳಿಡವಂತೆ ಸರ್ಕಾರವನ್ನು ಆಗ್ರಹಿಸಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಸಿದ್ದರಾಮಯ್ಯ, ರೈತರಿಗೆ 24 ಗಂಟೆಗಳಲ್ಲಿ ಉಚಿತ ವಿದ್ಯುತ್ ನೀಡುವ ಕುರಿತು ತಿಳಿಸಿರುವ ಬಿಜೆಪಿ ರೈತರ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ರೈತರ ಜ್ವಲಂತ ಸಮಸ್ಯೆಗಳಿಗೆ ತಕ್ಷಣ ಸ್ಪಂಧಿಸುವಂತೆ ಸರ್ಕಾರವನ್ನು ಆಗ್ರಹಿಸಿದರು.
ಸಿದ್ದರಾಮಯ್ಯನವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ. ಅಲ್ಲದೆ, ಕಾಳಸಂತೆಕೋರರ ವಿರುದ್ಧ ನಿರ್ದಾಕ್ಷಿಣ ಕ್ರಮಕ್ಕೆ ಸೂಚಿಸಲಾಗಿದೆ. ಹಾಗೆಯೇ ತೈಲದ ಸುಂಕ ಕಡಿತದ ಕುರಿತು ಶೀಘ್ರವೇ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
|