ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಸಗೊಬ್ಬರ ಕೊರತೆ ನೀಗಿಸುವಲ್ಲಿ ಸರ್ಕಾರ ವಿಫಲ  Search similar articles
ರಾಜ್ಯದಲ್ಲಿ ರಸಗೊಬ್ಬರಗಳ ಕೊರತೆ ನೀಗಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಜೆಡಿಎಸ್ ಶಾಸಕಾಗ ಪಕ್ಷದ ಕಚೇರಿಗೆ ಪ್ರವೇಶ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ರಸಗೊಬ್ಬರಗಳ ಕೊರತೆ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯಲಾಗಿದೆ ಎಂಬ ಬಿಜೆಪಿಯ ಮಾತಿನಲ್ಲಿ ಯಾವುದೇ ಸತ್ಯವಿಲ್ಲ ಎಂದು ತಿಳಿಸಿದ್ದಾರೆ.

ರಸಗೊಬ್ಬರ ಹಾಗೂ ಬಿತ್ತನೆ ಬೀಜಕ್ಕೆ ಆಗ್ರಹಿಸಿ ರಾಜ್ಯದ ಉದ್ದಗಲಕ್ಕೆ ರೈತರು ಪ್ರತಿಭಟನೆ ನಡೆಸಿದ್ದರೆ. ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿಯವರು, ರೈತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದ್ದಾರೆ. ಶೀಘ್ರವೇ ರೈತರ ನೆರವಿಗೆ ಧಾವಿಸುವಂತೆ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಜೆಡಿಎಸ್ ಪಕ್ಷವನ್ನು ಒಡೆಯುವ ಪ್ರಯತ್ನಗಳು ನಡೆದಿವೆ ಎಂಬ ವರದಿಗಳನ್ನು ತಳ್ಳಿಹಾಕಿದ ಅವರು, ಜೆಡಿಎಸ್ ಶಾಸಕರನ್ನು ಹಣ ಕೊಟ್ಟು ಖರೀದಿಸಲು ಯಾರಿಗೂ ಸಾಧ್ಯವಿಲ್ಲ. ನಾವೆಲ್ಲಾ ಒಗ್ಗಟ್ಟಾಗಿದ್ದೇವೆ ಎಂದು ತಿಳಿಸಿದರು.
ಮತ್ತಷ್ಟು
ತೈಲ ಸುಂಕ ಕಡಿತಕ್ಕೆ ಕಾಂಗ್ರೆಸ್ ಆಗ್ರಹ
ಖೋಟಾ ನೋಟು : 9 ಆರೋಪಿಗಳ ಬಂಧನ,
ರಾಜ್ಯಪಾಲರ ಭಾಷಣಕ್ಕೆ ಅಡ್ಡಿ ಪಡಿಸಿದ ವಿಪಕ್ಷ
ಭಯೋತ್ಪಾದನೆ ನಿಗ್ರಹಕ್ಕೆ ಪ್ರಾಶಸ್ತ್ಯ: ಠಾಕೂರ್
ತೈಲೆ ಬೆಲೆ ಏರಿಕೆ: ಕಿಡಿ ಕಾರಿದ ಮಾಜಿ ಪ್ರಧಾನಿ
ರಸಗೊಬ್ಬರ : ಮುಂದುವರಿದ ರೈತರ ಪ್ರತಿಭಟನೆ