ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲಗಳ ಬೆಲೆ ಏರಿಕೆಯನ್ನು ಖಂಡಿಸಿ ಶುಕ್ರವಾರ ಕೂಡ ರಾಜ್ಯಾದ್ಯಂತ ನಡೆದ ಪ್ರತಿಭಟನೆ ತೀವ್ರಗೊಂಡಿದೆ.
ಇಂದೂ ಮುಂದುವರಿದ ಪ್ರತಿಭಟನೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೊಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ಹಲವು ಕಡೆಗಳಲ್ಲಿ ರಸ್ತೆ ತಡೆ ನಡೆಸಿದ್ದಾರೆ. ವಿವಿಧ ಸಂಘ ಸಂಸ್ಥೆಗಳು ಹಾಗೂ ರಾಜಕೀಯ ಪಕ್ಷಗಳು ರಾಜ್ಯಾದ್ಯಂತ ಪ್ರತಿಭಟನೆಗಿಳಿದಿದ್ದವು.
ಈ ಮಧ್ಯೆ ಮಂಗಳೂರಿನಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿದರು. ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ಹೊಣೆ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಮೈಸೂರು, ಆನೇಕಲ್, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ಪ್ರತಿಭಟನೆ ತೀವ್ರ ಸ್ವರೂಪವನ್ನು ಪಡೆದುಕೊಂಡಿರುವ ಕುರಿತು ವರದಿ ಬಂದಿದೆ. ಈ ನಡುವೆ ಕಾಂಗ್ರೆಸ್ ನಾಯಕರು ರಾಜ್ಯ ಸರ್ಕಾರವು ತೈಲದ ಮೇಲಿನ ಸುಂಕ ಕಡಿತ ಮಾಡುವಂತೆ ಒತ್ತಾಯಿಸಿದೆ.
|