ರೈತರಿಗೆ ಸಮರ್ಪಕ ರೀತಿಯಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆ ಮಾಡುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಶನಿವಾರ ಕರೆ ನೀಡಿದ್ದ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ ಹಿನ್ನೆಲೆಯಲ್ಲಿ ನಗರದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಶಾಲಾ ಕಾಲೇಜುಗಳು, ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಣೆಯಿಂದ ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ಸೂಚಿಸಿದ್ದವು.
ಅಲ್ಲದೆ, ಬಸ್‌ಗಳ ಓಡಾಟವಿಲ್ಲದಿದ್ದುದರಿಂದ ಪರ ಊರಿಗೆ ತೆರಳುವ ಪ್ರಯಾಣಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಬೆಳಿಗ್ಗೆಯಿಂದಲೇ ರಸ್ತೆಗಳಲ್ಲಿ ಜನ ಸಂಚಾರವಿಲ್ಲದೆ ಬಿಕೋ ಎನ್ನುತ್ತಿದ್ದವು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು.
|