ಹೆಬ್ಬಾಳ ಕ್ಷೇತ್ರದಿಂದ ಆರಿಸಿ ಬಂದಿರುವ ಕಟ್ಟಾ ಸುಬ್ರಮಣ್ಯ ನಾಯ್ಡು ಇಂದು ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ.
ರಾಜಭವನದಲ್ಲಿ ಶನಿವಾರ ನಡೆದ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ರಾಜ್ಯಪಾಲ ರಾಮೇಶ್ವರ ಠಾಕೂರ್ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಕಟ್ಟಾ ಕುಟುಂಬದವರು ಹಾಗೂ ನೂರಾರು ಬೆಂಬಲಿಗರು ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಖಾತೆಯನ್ನು ಸರಕಾರ ನೀಡಿದರೂ ಸಮರ್ಥವಾಗಿ ನಿಭಾಯಿಸುತ್ತೇನೆ. ರಾಜ್ಯದ ಜನರ ಏಳಿಗೆಗಾಗಿ ಸದಾ ಶ್ರಮಿಸುತ್ತೇನೆ ಎಂದು ತಿಳಿಸಿದರು. ಈ ಮೊದಲು ನಡೆದ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಬೇಕಿದ್ದ ಕಟ್ಟಾ ಅವರು ಅನಾರೋಗ್ಯದಿಂದಾಗಿ ಪ್ರಮಾಣ ವಚನ ಸ್ವೀಕರಿಸಿರಲಿಲ್ಲ.
ಈ ಮಧ್ಯೆ ಖಾತೆ ಹಂಚಿಕೆ ಗೊಂದಲದ ನಿವಾರಣೆಗಾಗಿ ರಾಜ್ಯ ಉಸ್ತುವಾರಿ ವಹಿಸಿರುವ ಅರುಣ್ ಜೇಟ್ಲಿ ನಗರಕ್ಕೆ ಬರುತ್ತಾರೆಂದು ಹೇಳಲಾಗಿದ್ದು, ಆ ಬಳಿಕವಷ್ಟೇ ಖಾತೆ ಹಂಚಿಕೆ ನಡೆಯಲಿದೆ. ಒಟ್ಟಿನಲ್ಲಿ ಇನ್ನೆರಡು ದಿನಗಳಲ್ಲಿ ಖಾತೆ ಹಂಚಿಕೆ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.
|