ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನಕ್ಸಲರೊಂದಿಗೆ ಮಾತುಕತೆ ಸಾಧ್ಯವಿಲ್ಲ:ಆಚಾರ್ಯ ಸ್ಪಷ್ಟನೆ  Search similar articles
ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲದ ನಕ್ಸಲೀಯರ ಜೊತೆ ಸರ್ಕಾರ ಮಾತುಕತೆ ನಡೆಸುವುದಿಲ್ಲ ಎಂದು ರಾಜ್ಯದ ನೂತನ ಗೃಹ ಸಚಿವ ಡಾ. ವಿ.ಎಸ್. ಆಚಾರ್ಯ ಸ್ಪಷ್ಟವಾಗಿ ಹೇಳಿದ್ದಾರೆ.

ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಉಡುಪಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ನಕ್ಸಲ್ ವಾದ ಬೇರು ಬಿಡುತ್ತಿರುವ ದಕ್ಷಿಣ ಕನ್ನಡದ ಜಿಲ್ಲೆಗಳಲ್ಲಿ ಆರ್ಥಿಕಾಭಿವೃದ್ದಿ ಸೇರಿದಂತೆ ಜನಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರಕಾರ ಆದ್ಯತೆ ನೀಡುತ್ತದೆ. ಅರಣ್ಯವಾಸಿಗಳ ಕಲ್ಯಾಣ ಕಾರ್ಯಕ್ರಮ ಹಮ್ಮಿಕೊಳ್ಳಲು ಸರಕಾರ ಅರಣ್ಯ ಇಲಾಖೆಯೊಂದಿಗೆ ಮಾತುಕತೆ ನಡೆಸಲಿದೆ ಎಂದು ಅವರು ಹೇಳಿದರು.

ಉಗ್ರಗಾಮಿ ಚಟುವಟಿಕೆಗಳನ್ನು ನಡೆಸುವ ಇತರ ಸಂಘಟನೆಗಳ ಬಗ್ಗೆ ಬಿಗಿ ಕ್ರಮ ಕೈಗೊಳ್ಳುತ್ತೇವೆ. ಭಯೋತ್ಪಾದನೆ, ನಕ್ಸಲೈಟ್ ಸಮಸ್ಯೆಗಳನ್ನು ನಿಯಂತ್ರಿಸಲು ಬೇಕಾದ ನೆರವು ನೀಡಲು ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಅಲ್ಲದೆ, ಈ ಬಗ್ಗೆ ಜೂನ್ 9ರಂದು ಬೆಂಗಳೂರಿನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದೇನೆ ಎಂದು ಅವರು ತಿಳಿಸಿದರು.

ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ವರದಿಗಳು ಬಂದಿವೆ. ಈ ನಿಟ್ಟಿನಲ್ಲಿ ಕರಾವಳಿ ಕಾವಲು ಪಡೆಯನ್ನು ಮೇಲ್ದರ್ಜೆಗೆರಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮತ್ತಷ್ಟು
ಮರುಮೌಲ್ಯಮಾಪನದ ನಂತರ ಮಿಂಚಿದ ಬಾಲೆ
ಚಿತ್ರೋದ್ಯಮದ ಸಮಸ್ಯೆ ಬಗ್ಗೆ ಶೀಘ್ರವೇ ಸಭೆ
ಎಫ್‌ಡಿಎ ಪ್ರಶ್ನೆ ಪತ್ರಿಕೆ ಬಹಿರಂಗ ಆರೋಪ
10 ವಿದ್ಯಾರ್ಥಿಗಳಿಗೆ ಪರೀಕ್ಷೆ ನಿಷೇಧ
ಕೊನೆಗೂ ಹಂಚಿಕೆಯಾದ ಸಚಿವರ ಖಾತೆ
ರಸಗೊಬ್ಬರ ಸಮಸ್ಯೆ ಶೀಘ್ರ ಪರಿಹಾರ: ಸಿಎಂ