ಜುಲೈ 10 ರಿಂದ ಪ್ರಾರಂಭವಾಗಲಿರುವ ಬಜೆಟ್ ಅಧಿವೇಶನದ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂಧ ಗೌಡ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಮತ್ತು ರಾಜ್ಯಸಭಾ ಚುನಾವಣೆ ಪ್ರಕ್ರಿಯೆಗಳು ಮುಕ್ತಾಯಗೊಂಡ ಬಳಿಕ ನಿಗಮ ಮಂಡಲಿಗಳಿಗೆ ನೇಮಕ ಪ್ರಕ್ರಿಯೆ ಆರಂಭಗೊಳ್ಳಲಿದೆ.. ಆ ಬಳಿಕ ಸಚಿವ ಸಂಪುಟ ವಿಸ್ತರಣೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ತೆರವಾಗಿರುವ ಸ್ಥಾನಗಳಿಗೆ, ಜೂನ್ 26ರಂದು ನಡೆಯಲಿರುವ ಚುನಾವಣೆಗೆ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆ ಜೂನ್ 13ರಂದು ನಡೆಸಲಾಗುವುದು ಎಂದು ಅವರು ತಿಳಿಸಿದರು.
ಇದೇ ಸಂದರ್ಭದಲ್ಲಿ ಚಿಕೂನ್ ಗುನ್ಯಾ ರೋಗ ನಿಯಂತ್ರಣದ ಕುರಿತಂತೆ ಕೈಗೊಳ್ಳಲಾಗಿರುವ ಕ್ರಮದ ಬಗ್ಗೆ ವಿವರಿಸಿದ ಅವರು, ರಾಜ್ಯ ಸರ್ಕಾರದಿಂದ ಈಗಾಗಲೇ 55 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಪ್ರಕೃತಿ ವಿಕೋಪ ನಿರ್ವಹಣೆಗೆ ಜಿಲ್ಲೆಗೆ 2 ಕೋಟಿರೂ. ಬಿಡುಗಡೆ ಮಾಡಲಾಗಿದೆ. ಅಗತ್ಯಬಿದ್ದಲ್ಲಿ ಇನ್ನು ಹೆಚ್ಚಿನ ಹಣವನ್ನು ಸರ್ಕಾರ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.
|