ಹುಬ್ಬಳ್ಳಿ: ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ಪೂರೈಕೆಯಾಗದಿರುವ ಬಗ್ಗೆ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿರುವಂತೆ ಇತ್ತ ಪ್ರತಿಭಟನೆ ಹೊಸ ತಿರುವು ಪಡೆದುಕೊಂಡಿದೆ. ರೈತರು ಪ್ರತಿಭಟನೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ.
ಇಂದು ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತ ಸಂಘದ ಕಾರ್ಯಕರ್ತರು ರಸ್ತೆ ತಡೆ ನಡೆಸಿದರು. ಈ ಹಿನ್ನೆಲೆಯಲ್ಲಿ ನಗರದಲ್ಲಿ ಕೆಲಕಾಲ ಸಂಚಾರಿ ವ್ಯವಸ್ಥೆ ಸ್ಥಗಿತಗೊಂಡಿತು. ಇದರಿಂದ ಸಾರ್ವಜನಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಯಿತು.
ಈ ಪ್ರತಿಭಟನೆ ನಡೆಸಿದ ರೈತರಿಗೆ ಜೆಡಿಎಸ್ ಬೆಂಬಲ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಹಿರಿಯ ಮುಖಂಡ ಬಸವರಾಜ್ ಹೊರಟ್ಟಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರಿಗೆ ಶೀಘ್ರವೇ ರಸಗೊಬ್ಬರ ಪೂರೈಕೆ ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.
ಈ ಮಧ್ಯೆ ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ರೈತರು ಎರಡು ಬಸ್ಗಳಿಗೆ ಬೆಂಕಿ ಹಚ್ಚಿದ್ದು, ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಆಶ್ರುವಾಯು ಸಿಡಿಸಲಾಗಿದೆ ಎಂದು ತಿಳಿದು ಬಂದಿದೆ.
|