ಬೆಂಗಳೂರು: ಶೆಡ್ಡೊಂದರಲ್ಲಿ ಅಪಾರ ಪ್ರಮಾಣದಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಸ್ಪೋಟಕ ವಸ್ತುಗಳನ್ನು ನಗರದ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇಂದು(ಸೋಮವಾರ) ನಗರದ ಚಿಕ್ಕ ಜಾಲದ ಮಿಟ್ಕನಳ್ಳಿಯಲ್ಲಿ ಖಚಿತ ಸುಳಿವಿನ ಆಧಾರದ ಮೇರೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸ್ಪೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಕೂಡಲೇ ಸ್ಥಳಕ್ಕೆ ಬಾಂಬ್ ನಿಷ್ಕ್ತ್ರಿಯ ದಳದ ಅಧಿಕಾರಿಗಳು ಆಗಮಿಸಿದ್ದು, ಪರೀಶೀಲನೆಯಲ್ಲಿ ತೊಡಗಿದ್ದಾರೆ. ಸುಮಾರು 5ಲಕ್ಷ ಮೌಲ್ಯ ಹೊಂದಿರುವ ಈ ಸ್ಪೋಟಕ ವಸ್ತುಗಳು ಯಾರಿಗೆ ಸೇರಿದ್ದು ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಇದರಲ್ಲಿ 40 ಮೂಟೆ ಅಮೊನಿಯಂ ನೈಟ್ರೇಟ್, 50 ಜೆಲೆಟನ್‌ಗಳು ಹಾಗೂ 2 ಬಾಕ್ಸ್ಕೇಪ್ ಅನ್ನು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಭಯೋತ್ಪಾದಕರ ಛಾಯೆ ದಟ್ಟವಾಗಿ ಕಂಡುಬಂದಿರುವುದರಿಂದ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಅಲ್ಲದೆ, ಇತ್ತೀಚೆಗಷ್ಟೆ ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆಗಳಲ್ಲಿ ಶಂಕಿತ ಉಗ್ರರನ್ನು ಸೆರೆಹಿಡಿದಿರುವ ಹಿನ್ನೆಲೆಯಲ್ಲಿ ತನಿಖೆಗೆ ಮಹತ್ವ ಬಂದಿದೆ.
|