ಬೆಂಗಳೂರು: ಎಫ್‌ಡಿಎ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಬೆಂಗಳೂರು ನಗರದ ಆರ್.ಸಿ. ಕಾಲೇಜು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ನಡೆದ ಪರೀಕ್ಷಾ ಅಕ್ರಮ ಕುರಿತಂತೆ ಆಯೋಗ ಕಾರ್ಯದರ್ಶಿ ಡಿ.ಬಿ. ಪಾಟೀಲ್ ಜಾರಿ ಮಾಡಲಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಅಕ್ರಮವನ್ನು ಸಹಿಸಲು ಪ್ರಶ್ನೆಯೇ ಇಲ್ಲ. ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ. ನಿನ್ನೆ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ನಡೆದ ಪ್ರಕರಣಕ್ಕೆ ಕುರಿತಂತೆ ತನಿಖೆ ಆರಂಭಿಸಲಾಗಿದ್ದು, ಇದರಲ್ಲಿ ಕೆಪಿಎಸ್‌ಸಿ ಅಧಿಕಾರಿಗಳು ಮತ್ತು ಆಯಾ ಕಾಲೇಜುಗಳ ಸಿಬ್ಬಂದಿ ವರ್ಗ ಶಾಮೀಲಾಗಿದ್ದಾರೆ ಎಂದು ತಿಳಿದು ಬಂದಿದೆ. ಒಂದು ವೇಳೆ ಆರೋಪ ಸಾಬೀತಾದಲ್ಲಿ ಅಂತಹವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಮಧ್ಯೆ ನಿನ್ನೆ ನಡೆದ ಕೆಪಿಎಸ್‌ಸಿ ಪರೀಕ್ಷೆಯಲ್ಲಿ ನಡೆದ ಅಕ್ರಮಗಳ ಬಗ್ಗೆ ಸಾರ್ವಜನಿಕರು ಹಾಗೂ ಅಭ್ಯರ್ಥಿಗಳು ತೀವ್ರ ಅಸಮಾಧಾನಗೊಂಡಿದ್ದು, ಮತ್ತೊಮ್ಮೆ ಪರೀಕ್ಷೆ ನಡೆಸುವಂತೆ ಆಯೋಗವನ್ನು ಆಗ್ರಹಿಸಿದ್ದಾರೆ.
|