ಸಮರ್ಪಕವಾಗಿ ರಸಗೊಬ್ಬರ ಪೂರೈಕೆಯಾಗದಿರುವ ಬಗ್ಗೆ ಆಕ್ರೋಶಗೊಂಡಿರುವ ರೈತರು ಮಂಗಳವಾರ ಕೂಡ ಪ್ರತಿಭಟನೆಯನ್ನು ತೀವ್ರಗೊಳಿಸಿದ್ದು, ರಾಜ್ಯದೆಲ್ಲೆಡೆಗೂ ಪ್ರತಿಭಟನೆ ವ್ಯಾಪಿಸಿದೆ.
ಹಾವೇರಿಯ ಮೊಟೆಬೆನ್ನೂರಿನಲ್ಲಿ ಆಕ್ರೋಶಗೊಂಡ ರೈತರು ರಸಗೊಬ್ಬರಕ್ಕಾಗಿ ತೀವ್ರ ಹೋರಾಟ ನಡೆಸಿದ್ದಾರೆ. ನಾಲ್ಕು ಬಸ್‌ಗಳಿಗೆ ಬೆಂಕಿ ಹಚ್ಚಿರುವ ರೈತರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ರೈತರು ಪ್ರತಿಭಟನಾ ಮೆರವಣಿಗೆ ನಡೆಸಿದ್ದು,. ಸಂಚಾರ ಅಸ್ತವ್ಯಸ್ಥಗೊಂಡಿದೆ.
ಅಲ್ಲದೆ, ಉದ್ರಿಕ್ತಗೊಂಡ ರೈತರು ಪೊಲೀಸರ ಮೇಲೆ ಧಾಳಿ ನಡೆಸಿದ್ದು, ಹಲವು ಬಸ್‌ಗಳಿಗೆ ರೈತರು ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಗುಂಪು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅಲ್ಲದೆ, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ.
ಗುಲ್ಬರ್ಗಾದಲ್ಲಿ ಖರ್ಗೆ ಸರಕಾರವು ರಾಜ್ಯದಲ್ಲಿ ರೈತರಿಗೆ ಸೂಕ್ತ ರೀತಿಯಲ್ಲಿ ರಸಗೊಬ್ಬರ ಪೂರೈಕೆ ಮಾಡದಿದ್ದಲ್ಲಿ ಕಾಂಗ್ರೆಸ್ ಉಗ್ರ ಹೋರಾಟ ನಡೆಸುವುದಾಗಿ ವಿಪಕ್ಷ ನಾಯಕ ಮಲ್ಲಿಕಾರ್ಜುವ ಖರ್ಗೆ ತಿಳಿಸಿದ್ದಾರೆ.
|