ವಿಧಾನಸಭಾ ಚುನಾವಣೆಯಲ್ಲಿ ತನ್ನ ಕ್ಷೇತ್ರದ ಮತದಾರರಿಂದ ಮಣ್ಣುಮುಕ್ಕಿಸಿಕೊಂಡಿರುವ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಈಗ ವಿಧಾನಪರಿಷತ್ ಮೂಲಕ ವಿಧಾನಸೌಧವನ್ನು ಪ್ರವೇಶಿಸಲು ನಿರ್ಧರಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಣಕ್ಕಿಳಿದಿರುವ ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಶಿಕ್ಷಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರೆಲ್ಲರ ಸಮಸ್ಯೆಗಳ ಪರಿಹಾರಕ್ಕಾಗಿ ವಿಧಾನ ಪರಿಷತ್ ಒಳಗೆ ಹಾಗೂ ಹೊರಗೆ ಹೋರಾಡುವುದಾಗಿ ತಿಳಿಸಿದರು.
ಶಿಕ್ಷಕರ ಒತ್ತಡದ ಮೇರೆಗೆ ಚುನಾವಣೆಗೆ ಇಳಿದಿರುವುದಾಗಿ ತಿಳಿಸಿದ ಅವರು, ಈ ಕ್ಷೇತ್ರದ ಎಲ್ಲಾ ಶಿಕ್ಷಕರ ಬೆಂಬಲದಿಂದ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಈ ಮೂಲಕ ಶಿಕ್ಷಕರ ಬೇಡಿಕೆಗಾಗಿ ಹೋರಾಟ ಮಾಡುವುದಾಗಿ ಭರವಸೆ ನೀಡಿದರು.
ಗಡಿ, ಜಲ ಭಾಷೆಯೂ ಸೇರಿದಂತೆ ಕರ್ನಾಟಕದ ಜ್ವಲಂತ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳು ತೀವ್ರ ಗಮನ ಹರಿಸಿ, ಪರಿಹಾರಕ್ಕೆ ಕ್ರಮಕೈಗೊಳ್ಳಬೇಕೆಂದು ಅವರು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
|