ಹಾವೇರಿಯಲ್ಲಿ ರೈತರ ಮೇಲೆ ನಡೆಸಿದ ಗೋಲಿಬಾರ್ ಪ್ರಕರಣದ ಕುರಿತಾಗಿ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ.
ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಇದು ರೈತರ ಮೇಲೆ ನಡೆದಿರುವ ದೌರ್ಜನ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಮೇಲೆ ನಡೆದಿರುವ ಗೋಲಿಬಾರ್ ಸರ್ಕಾರದ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ರೈತರ ಪ್ರಾಣ ತೆಗೆಯುವಂತಹ ಪರಿಸ್ಥಿತಿ ನಿರ್ಮಾಣಕ್ಕೆ ಕಾರಣರಾದವರ ವಿರುದ್ಧ ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕೂಡಾ ಈ ಕುರಿತ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಮುಖ್ಯಮಂತ್ರಿಗಳು ಹಸಿರು ಟವೆಲ್ ಸ್ಟಂಟ್ ಬಿಡಿ ಎಂದು ಟೀಕಿಸಿದ್ದಾರೆ.
ರೈತರ ಪ್ರತಿಭಟನೆಯನ್ನು ಯಾರದೋ ಕಾಣದ ಕೈ ಎಂದು ಆರೋಪಿಸುತ್ತಿರುವ ಯಡಿಯೂರಪ್ಪ ಅವರು ಅಧಿಕಾರಿಗಳ ವರ್ಗಾವಣೆಯಲ್ಲಿ ಕಾಲ ಕಳೆಯುತ್ತಿರುವುದು ದುರದೃಷ್ಟಕರ ಎಂದು ತಿಳಿಸಿದ್ದಾರೆ.
ಈ ಘಟನೆಯ ಬಗ್ಗೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕೆಂದು ರಾಜ್ಯಸಭೆಯ ಮಾಜಿ ಸದಸ್ಯ ಜನಾರ್ಧನ ಪೂಜಾರಿ ಆಗ್ರಹಿಸಿದ್ದಾರೆ.
|