ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಮುಖ್ಯಮಂತ್ರಿ ಚಂದ್ರು ಆಯ್ಕೆಯಾಗಿದ್ದಾರೆ.
ಈ ಸ್ಥಾನದಲ್ಲಿದ್ದ ಡಾ|ಸಿದ್ದಲಿಂಗಯ್ಯ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಚಂದ್ರು ಅವರು ಸಂಪುಟ ದರ್ಜೆ ಸಚಿವ ಸ್ಥಾನಮಾನ ಹೊಂದಿರಲಿದ್ದು, ಸಿದ್ದಲಿಂಗಯ್ಯ ಅವರು ರಾಜ್ಯ ಸಚಿವರ ಸ್ಥಾನಮಾನ ಹೊಂದಿರುತ್ತಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಸಂತಸ ವ್ಯಕ್ತಪಡಿಸಿದ ಚಂದ್ರು, ಇದು ಮಂತ್ರಿ ಪದವಿಗಿಂತ ಖುಷಿ ತರುವ ಕೆಲಸ. ಪಕ್ಷಾತೀತವಾಗಿ ಹೋರಾಟ ನಡೆಸಲು ಅವಕಾಶ ದೊರೆತಿದೆ. ಕನ್ನಡ ನೆಲ, ಜಲ, ಭಾಷೆಯ ರಕ್ಷಣೆಗಾಗಿ ಹೋರಾಡುವುದಾಗಿ ತಿಳಿಸಿದರು.
|