ವಿಷಯುಕ್ತ ನೀರು ಕುಡಿದು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 10ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಅಸ್ವಸ್ಥರಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಘಟನೆ ಬುಧವಾರ ನಗರದಲ್ಲಿ ಸಂಭವಿಸಿದೆ.
ಅಸ್ವಸ್ಥಗೊಂಡವರನ್ನು ಹತ್ತಿರದ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ.
ನಗರಸಭೆ ಕಚೇರಿ ಬಳಿಯಿರುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲು ಕ್ಲೋರಿನ್ ಬಳಕೆ ಮಾಡಲಾಗಿತ್ತು. ಪೈಪ್‌ಗಳ ಮುಖೇನ ವಿಷಾನಿಲ ಸೋರಿಕೆಯುಂಟಾಗಿ ಸಿದ್ದಗಂಗಾ ಬಾಲಕರ ಮತ್ತು ಬಾಲಕಿಯರ ಕಾಲೇಜಿನ ವಿದ್ಯಾರ್ಥಿಗಳು ನೀರು ಕುಡಿದು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಈ ಘಟನೆಗೆ ನಗರಸಭೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ, ಇಷ್ಟೆಲ್ಲಾ ಘಟನೆಗಳು ನಡೆದರೂ ನಗರಸಭೆಯ ಯಾವೊಬ್ಬ ಅಧಿಕಾರಿಯೂ ಭೇಟಿ ನೀಡಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ.
|