ಹೈಟೆಕ್ ವೇಶ್ಯಾವಾಟಿಕೆ ನಡೆಸುತ್ತಿದ್ದ ಮನೆಯೊಂದರ ಮೇಲೆ ದಾಳಿ ನಡೆಸಿರುವ ಪೊಲೀಸರು ಮಧ್ಯವರ್ತಿ ಸೇರಿದಂತೆ ಒಂಭತ್ತು ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಖಚಿತ ಸುಳಿವಿನ ಆಧಾರದ ಮೇಲೆ ಹೆಲ್ತ್ ಲೇಔಟ್ನಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ಕಾರು, ಎರಡು ಬೈಕ್ ಹಾಗೂ 5 ಮೊಬೈಲ್ ಸೇರಿದಂತೆ 1500ರೂ. ನಗದು ವಶಪಡಿಸಿಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ಹೂಗ್ಲಿ ಮೂಲದ ಸುಬೇಂದ್ರ ದೋಗುನಾಥನ್ ಆಲಿಯಾಸ್ ಛೋಟು ಎಂಬಾತ ಬಂಧಿತ ಆರೋಪಿ. ಈತ ಕೋಲ್ಕತ್ತಾ ಮೂಲದ ಎಂಟು ಹುಡುಗಿಯರನ್ನು ಇಟ್ಟುಕೊಂಡು ನಗರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎಂದು ತನಿಖೆಯಿಂದ ತಿಳಿದು ಬಂದಿದೆ.
ಕಸೂತಿ ಕೆಲಸ ಮಾಡುತ್ತಿದ್ದ ಆರೋಪಿ ಸುಬೇಂದ್ರ ದೋಗನಾಥನ್ ಅದರಲ್ಲಿ ನಷ್ಟ ಅನುಭವಿಸಿದ ಬಳಿಕ ಈ ದುಷ್ಕೃತ್ಯಕ್ಕೆ ಇಳಿದಿದ್ದ ಎಂದು ಹೇಳಲಾಗಿದೆ.
|