ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗೋಲಿಬಾರ್ ಸಿಬಿಐ ತನಿಖೆಗೊಪ್ಪಿಸಿ: ರೇವಣ್ಣ  Search similar articles
ಹಾವೇರಿಯಲ್ಲಿ ರೈತರ ಮೇಲೆ ನಡೆದಿರುವ ಗೋಲಿಬಾರ್ ಪ್ರಕರಣವನ್ನು ಖಂಡಿಸಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ, ಈ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿದ್ದಾರೆ.

ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಸಗೊಬ್ಬರ ಮತ್ತು ಬಿತ್ತನೆ ಬೀಜ ಕೇಳಿದ್ದಕ್ಕಾಗಿ ರೈತರ ಮೇಲೆ ಗೋಲಿಬಾರ್ ನಡೆಸಿರುವುದು ರಾಜ್ಯ ಸರ್ಕಾರದ ಮೂರ್ಖತನದ ಪರಮಾವಧಿಯಾಗಿದ್ದು, ಕೂಡಲೇ ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವ ಮೂಲಕ ಒಂದು ವಾರದೊಳಗೆ ಪ್ರಕರಣದ ಕುರಿತು ನಿಷ್ಪಕ್ಷಪಾತ ವರದಿ ಸಲ್ಲಿಸಿ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ಪತ್ರಿಕೆಗಳಲ್ಲಿ ಹೇಳಿಕೆ ಕೊಡುವ ಬದಲು ನೇರವಾಗಿ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ್ಯ ಹೂಡಿ ರೈತರ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಯವರನ್ನು ಅವರು ಒತ್ತಾಯಿಸಿದರು.

ರಾಜಕೀಯ ಪಕ್ಷಗಳ ಮೇಲೆ ಮತ್ತು ರಾಜ್ಯಪಾಲರ ಮೇಲೆ ಆರೋಪ ಹೊರಿಸುತ್ತಿರುವ ಮುಖ್ಯಮಂತ್ರಿಗಳು ಅಧಿಕಾರದ ಪಡೆದ ಬಳಿಕ ಏನು ಮಾಡುತ್ತಿದ್ದರು ಎಂದು ಅವರು ಪ್ರಶ್ನಿಸಿದರು.
ಮತ್ತಷ್ಟು
ವೇಶ್ಯಾವಾಟಿಕೆ ನಡೆಸುತ್ತಿದ್ದ 9 ಮಂದಿ ಬಂಧನ
ನಿಲ್ಲದ ಆಕ್ರೋಶ: ಹಾವೇರಿಯಲ್ಲಿ ನಿಷೇಧಾಜ್ಞೆ
ವಿಷನೀರು ಕುಡಿದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ರೈತರ ಗಲಭೆಗೆ ಕೇಂದ್ರವೇ ಹೊಣೆ: ಸಿಎಂ
ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿ ಚಂದ್ರು ಆಯ್ಕೆ
ಗೋಲಿಬಾರ್ ಪ್ರಕರಣ: ತೀವ್ರ ಖಂಡನೆ