ರಸಗೊಬ್ಬರ, ಬಿತ್ತನೆ ಬೀಜಕ್ಕಾಗಿ ನಡೆದಿರುವ ಗೋಲಿಬಾರ್ ಪ್ರಕರಣದ ಹೊಣೆಯನ್ನು ಮುಖ್ಯಮಂತ್ರಿಯವರು ಹೊತ್ತುಕೊಳ್ಳಲಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಹಾವೇರಿಯಲ್ಲಿ ರಸಗೊಬ್ಬರ ಕುರಿತಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಗೋಲಿಬಾರ್ ನಡೆಸಿದ ಪರಿಣಾಮವಾಗಿ ಒಬ್ಬ ರೈತ ಮೃತಪಟ್ಟಿದ್ದು, ಇದು ಸರ್ಕಾರದ ಸಂಪೂರ್ಣ ವೈಫಲ್ಯವನ್ನು ಎತ್ತಿತೋರಿಸುತ್ತದೆ ಎಂದು ಖರ್ಗೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಹಾವೇರಿಯಲ್ಲಿ ನಡೆದಿರುವ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿದ ಅವರು, ಸರ್ಕಾರ ರೈತರಲ್ಲಿ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದ್ದಾರೆ.
ರೈತರ ನ್ಯಾಯಯುತವಾದ ಹೋರಾಟವನ್ನು ಕಾಂಗ್ರೆಸ್ ಪಕ್ಷ ಬೆಂಬಲಿಸಲಿದೆ. ರಾಜ್ಯದ ಹಾಗೂ ರೈತರ ದೃಷ್ಟಿಯಿಂದ ವಿರೋಧ ಪಕ್ಷವಾಗಿ ಸರಕಾರಕ್ಕೆ ಅಗತ್ಯ ಸಹಕಾರವನ್ನು ನೀಡಲು ಪಕ್ಷ ಸಿದ್ದವಿದೆ ಎಈದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
|