ರಸಗೊಬ್ಬರದ ಸಂಗ್ರಹದ ಬಗ್ಗೆ ರಾಜ್ಯಪಾಲರ ಆಳ್ವಿಕೆಯಲ್ಲಿ ಅಧಿಕಾರಿಗಳು ವಹಿಸಿದ ನಿರ್ಲಕ್ಷ್ಯವೇ ರಸಗೊಬ್ಬರಗಳ ಕೊರತೆಗೆ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಡಿ.ವಿ. ಸದಾನಂದ ಗೌಡ ಆರೋಪಿಸಿದ್ದಾರೆ.
ನಗರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಆಳ್ವಿಕೆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಿರುವ ರಸಗೊಬ್ಬರ ಪೂರೈಸಿಲ್ಲ. ರಾಜ್ಯದ ಅಧಿಕಾರಿಗಳು ಎಷ್ಟು ಗೊಬ್ಬರ ಬೇಕು ಎಂದು ಅಂದಾಜು ಮಾಡಿ ಅದನ್ನು ಸಂಗ್ರಹಿಸುವ ಕೆಲಸ ಮಾಡಿಲ್ಲ. ಈ ವಿಚಾರದಲ್ಲಿ ರಾಜ್ಯಪಾಲರು ತೋರಿದ ನಿರ್ಲಕ್ಷ್ಯದಿಂದಾಗಿ ನೂತನ ಸರ್ಕಾರ ಇಂತಹ ಸಮಸ್ಯೆ ಎದುರಿಸಬೇಕಾಗಿ ಎಂದು ದೂರಿದ್ದಾರೆ.
ಹಾವೇರಿಯಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಸರ್ಕಾರ ಎಚ್ಚರಿಕೆಯ ಕ್ರಮವನ್ನು ಕೈಗೊಳ್ಳಲಿದೆ. ಈ ಪರಿಸ್ಥಿತಿಗೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಸರ್ಕಾರವು ರೈತರಿಗೆ ಗೊಬ್ಬರ ಪೂರೈಸಲು ಸೂಕ್ತ ಕ್ರಮ ಕೈಗೊಳ್ಳಲಿದೆ. ರೈತರು ಯಾವುದೇ ಕಾರಣಕ್ಕೆ ಉದ್ರಿಕ್ತರಾಗದೆ ಶಾಂತಿ ಕಾಪಾಡಿಕೊಳ್ಳಬೇಕು. ಸಮಾಜ ಘಾತಕ ಶಕ್ತಿಗಳು ಪರಿಸ್ಥಿತಿಯ ದುರ್ಲಾಭ ಪಡೆಯಲು ಅವಕಾಶ ಮಾಡಿಕೊಡಬಾರದು ಎಂದು ಅವರು ರೈತರಲ್ಲಿ ವಿನಂತಿಸಿಕೊಂಡಿದ್ದಾರೆ.
|