ಅಕ್ರಮವಾಗಿ ರಸಗೊಬ್ಬರ ಅಕ್ರಮ ದಾಸ್ತಾನು ಪೂರೈಕೆ ಮಾಡುವವರ ಕುರಿತು ಸರ್ಕಾರಕ್ಕೆ ಮಾಹಿತಿ ನೀಡಿದವರಿಗೆ 10 ಸಾವಿರ ರೂ. ಬಹುಮಾನ ನೀಡಲಾಗುವುದು ಎಂದು ಸರ್ಕಾರ ಘೋಷಿಸಿದೆ.
ರಸಗೊಬ್ಬರ ಕೊರತೆಯಿಂದಾಗಿ ರಾಜ್ಯದೆಲ್ಲೆಡೆ ಉಂಟಾಗಿರುವ ಸಮಸ್ಯೆ ಕುರಿತು ಚರ್ಚೆ ನಡೆಸುವ ನಿಟ್ಟಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಅಕ್ರಮವಾಗಿ ಸರಬರಾಜು ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಅಕ್ರಮ ರಸಗೊಬ್ಬರ ಮಾರಾಟವನ್ನು ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಜಾಗೃತ ದಳ ನಿಗ್ರಹಕ್ಕೆ ಕ್ರಮ ಕೈಗೊಳ್ಳುವ ಬಗ್ಗೆಯೂ ಸಚಿವ ಸಂಪುಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ.
ಈ ಮಧ್ಯೆ, ಮುಖ್ಯಮಂತ್ರಿ ಹಾಗೂ ಸರ್ಕಾರದ ಹೆಸರಿನಲ್ಲಿ ಅರ್ಚನೆ ನಡೆಸುವ ಕುರಿತು ಮುಜರಾಯಿ ಇಲಾಖೆಗೆ ನೀಡಿರುವ ಆದೇಶವನ್ನು ವಾಪಾಸ್ ಸರ್ಕಾರ ತೆಗೆದುಕೊಂಡಿದೆ. ಈ ಬಗ್ಗೆ ಸರ್ಕಾರದ ನಿರ್ಧಾರದ ಕುರಿತು ತೀವ್ರ ವಿರೋಧ ಬಂದ ಹಿನ್ನೆಲೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
|