ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆಂದು ಅಧ್ಯಾಪಕರಿಂದ ಹಲ್ಲೆಗೊಳಗಾದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆದಿಚುಂಚನಗಿರಿ ಕಾಲೇಜಿನಲ್ಲಿ ನಡೆದಿದೆ.
ಕಾಲೇಜಿನ ಬಿ.ಇ. ವಿದ್ಯಾರ್ಥಿ ಯಶವಂತ್ ಪಾಟೀಲ್ ಎಂಬುವವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾಲೇಜಿನಲ್ಲಿ ಇತ್ತೀಚೆಗಷ್ಟೆ ಇಂತಹ ಐದು ಪ್ರಕರಣಗಳು ನಡೆದಿದ್ದರಿಂದ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಗಿಳಿದಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಂಪ್ಯೂಟರ್ ಸೈನ್ಸ್ ಐದನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ ಪಾಟೀಲ್, ಪರೀಕ್ಷೆಯೊಂದರಲ್ಲಿ ನಕಲು ಮಾಡಿದ್ದಾನೆಂದು ಆರೋಪಿಸಿ ಕಾಲೇಜಿನ ಅಧ್ಯಾಪಕ ಧನಂಜಯ್ ಹಲ್ಲೆ ನಡೆಸಿದ್ದಾರೆ. ಈ ಘಟನೆಯಿಂದ ಬೇಸರಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ.
|