ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ರೈತರಿಗೆ ದ್ರೋಹವೆಸಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ನಗರದ ಅರಮನೆ ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಪಕ್ಷದ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಅವರು, ರಸಗೊಬ್ಬರದ ಪೂರೈಕೆಯಲ್ಲಿ ಸರ್ಕಾರ ಅಜಾಗರೂಕತೆಯಿಂದ ನಡೆದುಕೊಂಡಿದೆ. ಇದು ಸರ್ಕಾರದ ಅಳಿವಿಗೆ ಕಾರಣವಾಗಲಿದೆ ಎಂದು ತಿಳಿಸಿದರು.
ರಸಗೊಬ್ಬರ ವಿಚಾರದಲ್ಲಿ ನಡೆಸುತ್ತಿರುವ ಮುಷ್ಕರಕ್ಕೆ ರಾಜಕೀಯ ಕೈವಾಡವಿದೆ ಎಂದು ಆರೋಪಿಸುತ್ತಿರುವ ಮುಖ್ಯಮಂತ್ರಿಗಳು ಅಂತಹ ಪಕ್ಷಗಳ ಹೆಸರುಗಳನ್ನು ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದರು.
ಕಳೆದ ವಿಧಾನಸಭೆಯಲ್ಲಿ ಜೆಡಿಎಸ್ ಸೋಲು ಅನುಭವಿಸಲು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಳ ಒಪ್ಪಂದವೇ ಕಾರಣ ಎಂದು ಅವರು ಈ ಸಂದರ್ಭದಲ್ಲಿ ನುಡಿದರು.
|