ಕೇಂದ್ರ ಸರ್ಕಾರವು ರಾಜ್ಯದ ಅಭಿವೃದ್ದಿಗೆ ಪೂರಕವಾಗಿ ನೆರವು ನೀಡದೆ ಮಲತಾಯಿ ಧೋರಣೆ ಅನುಸರಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರಕ್ಕೆ ಒಂದು ಬಾರಿ ಜಿಲ್ಲೆಗೆ ತೆರಳಿ ಅಲ್ಲಿನ ಸಮಸ್ಯೆಗಳಿಗೆ ಪರಿಹಾರ ಹುಡುಕುವಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಈಗಾಗಲೇ ತಿಳಿಸಲಾಗಿದೆ ಎಂದು ಹೇಳಿದರು.
ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಸೂಚಿಸುವ ನಿಟ್ಟಿನಲ್ಲಿ ಸೋಮವಾರದಂದು ಎಲ್ಲಾ ಜಿಲ್ಲೆಗಳ ಅಧಿಕಾರಿಗಳ ಸಭೆ ಕರೆದು ಸರ್ಕಾರದ ಚಿಂತನೆ ತಿಳಿಸಿ ಅಭಿವೃದ್ದಿ ಕಾರ್ಯಕ್ರಮಗನ್ನು ಜಾರಿಗೊಳಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಪೆಟ್ರೋಲ್ ಬೆಲೆ ಇಳಿಕೆ:ಶೀಘ್ರ ನಿರ್ಧಾರ
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ಮಾರಾಟ ತೆರಿಗೆ ಕಡಿಮೆಗೊಳಿಸುವ ವಿಚಾರದಲ್ಲಿ ಅಂತಿಮ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು. ಕೇಂದ್ರ ಸರ್ಕಾರ ನಾಳೆ ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಹಣಕಾಸು ಮಂತ್ರಿಗಳ ಸಭೆ ಕರೆದಿದೆ. ಸಭೆಗೆ ರಾಜ್ಯದಿಂದ ಗೃಹ ಸಚಿವ ವಿ.ಎಸ್. ಆಚಾರ್ಯ ತೆರಳಲಿದ್ದಾರೆ. ಸಭೆಯ ಬಳಿಕ ಪೆಟ್ರೌಲ್ ಮೇಲಿನ ತೆರಿಗೆ ಕಡಿತಗೊಳಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.
|