ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮೈತ್ರಿಗೆ ಅಹ್ವಾನ ಬಂದಿಲ್ಲ: ವೈಎಸ್.ವಿ ದತ್ತಾ  Search similar articles
ರಾಜ್ಯಸಭೆಗೆ ಸ್ಥಾನ ಹಂಚಿಕೆ ಕುರಿತು ಕಾಂಗ್ರೆಸ್ ಪಕ್ಷದ ಜೊತೆಯಲ್ಲಿ ಯಾವುದೇ ರೀತಿಯ ಮಾತುಕತೆ ನಡೆದಿಲ್ಲ ಎಂದು ಜೆಡಿಎಸ್ ವಕ್ತಾರ ವೈ.ಎಸ್.ವಿ. ದತ್ತಾ ಸ್ಪಷ್ಟ ಪಡಿಸಿದ್ದಾರೆ.

ಶನಿವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಜೆಡಿಎಸ್ ಆತ್ಮಾವಲೋಕನ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮೈತ್ರಿ ಮಾಡಿಕೊಳ್ಳದೆ ಸ್ಥಾನ ಪಡೆಯುವುದು ಕಷ್ಟ ಸಾಧ್ಯ. ಈ ನಿಟ್ಟಿನಲ್ಲಿ ಆಹ್ವಾನ ಬಂದರೆ ಮೈತ್ರಿಗೆ ಮಾತುಕತೆ ಸಿದ್ದ ಎಂದು ಅವರು ತಿಳಿಸಿದರು.

ಒಂದು ವೇಳೆ ಕಾಂಗ್ರೆಸ್ ಮೈತ್ರಿಗೆ ಮುಂದಾಗದಿದ್ದರೆ ಜೆಡಿಎಸ್ ಏಕಾಂಗಿಯಾಗಿ ಹೋರಾಟ ನಡೆಸಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ಶಾಸಕರ ಜೊತೆ ಚರ್ಚೆ ನಡೆಸಿದ ಬಳಿಕ ಮೈತ್ರಿ ಕುರಿತು ಅಂತಿಮ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಮಧ್ಯೆ ಜೆಡಿಎಸ್ ಪಕ್ಷದ ಆತ್ಮಾವಲೋಕನ ಸಭೆ ಇಂದು ಕೂಡ ಮುಂದುವರೆದಿದ್ದು, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಪಕ್ಷದ ಪ್ರಭಾವಿ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ.

ಈ ನಡುವೆ ರಾಜ್ಯಸಭೆ ಹಾಗೂ ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ ಮಾತುಕತೆಗೆ ಹೈಕಮಾಂಡ್ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡ ಪೃಥ್ವಿರಾಜ್ ಚೌಹಾಣ್ ಇಂದು ನಗರಕ್ಕೆ ಆಗಮಿಸಲಿದ್ದು, ದೇವೇಗೌಡರ ಜೊತೆ ಮಾತುಕತೆ ನಡೆಸಲಿದ್ದಾರೆ. ಆ ಬಳಿಕವಷ್ಟೆ ಕಾಂಗ್ರೆಸ್ ಪಕ್ಷದ ಅಂತಿಮ ಪಟ್ಟಿ ಬಿಡುಗಡೆಯಾಗುವ ನೀರೀಕ್ಷೆ ಇದೆ.
ಮತ್ತಷ್ಟು
ನೀರಾವರಿ ಯೋಜನೆಗೆ ಒತ್ತು: ಯಡಿಯೂರಪ್ಪ
ವಿದ್ಯುತ್ ತಂತಿ ತಗಲಿ ಇಬ್ಬರ ಸಾವು
ಅಭಿವೃದ್ದಿಗೆ ಸಹಕರಿಸದಿದ್ದರೆ ಉಗ್ರ ಹೋರಾಟ: ಬಿಎಸ್‌ವೈ
ಶಾಸಕ ಪತ್ನಿ ಪದ್ಮಪ್ರಿಯಾ ಪತ್ತೆ
ಪ್ರಕೃತಿ ವಿಕೋಪ ತಡೆಗೆ ಸಿದ್ಧತೆ ಅಗತ್ಯ: ಶಿವರಾಜ್
ಗೋಲಿಬಾರ್ ನ್ಯಾಯಾಂಗ ತನಿಖೆಗೆ ಗೌಡ ಆಗ್ರಹ