ಹಾವೇರಿಯಲ್ಲಿ ರೈತರ ಮೇಲೆ ನಡೆದ ಗೋಲಿಬಾರ್ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಲು ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ.
ರೈತರ ಮೇಲೆ ನಡೆದಿರುವ ಗೋಲಿಬಾರ್ ಪ್ರಕರಣವನ್ನು ನ್ಯಾಯಾಂಗಕ್ಕೆ ಒಪ್ಪಿಸಲಿದ್ದು, ಸಮಿತಿಗೆ ನ್ಯಾ| ಜಗನ್ನಾಥ್ ಶೆಟ್ಟಿ ನೇತೃತ್ವ ವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಸಮಿತಿಯು ಪ್ರಕರಣದ ಕುರಿತು ವರದಿ ನೀಡಲು ನಾಲ್ಕು ತಿಂಗಳ ಸಮಯವಕಾಶ ನೀಡಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ರಸಗೊಬ್ಬರಕ್ಕಾಗಿ ಹಾವೇರಿಯಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಗೋಲಿಬಾರ್ನಲ್ಲಿ ಒರ್ವ ರೈತ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದರು. ಈ ಘಟನೆಯಿಂದ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ವ್ಯಕ್ತವಾಗಿತ್ತು. ಅಲ್ಲದೆ, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೂ ಆದೇಶಿಸಬೇಕೆಂಬ ಕೂಗು ಎಲ್ಲೆಡೆ ಕೇಳಿ ಬಂದಿತ್ತು. ಕೊನೆಗೂ ಒತ್ತಡಕ್ಕೆ ಮಣಿದ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶ ನೀಡಿದೆ.
|