ದೆಹಲಿಯಲ್ಲಿ ನಿಗೂಢವಾಗಿ ಸಾವಿಗೀಡಾಗಿರುವ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಅವರ ಸಹೋದರ ರಾಜಶೇಖರ್ ಅವರು ಘಟನೆಯ ಕುರಿತು ಪ್ರತಿಕ್ರಿಯೆ ನೀಡಿದ್ದು, ತನ್ನ ಸಹೋದರಿಯ ಮನೆಯಲ್ಲಿ ಯಾವುದೇ ಕೌಟುಂಬಿಕ ಕಲಹಗಳಿರಲಿಲ್ಲ ಎಂದು ಹೇಳಿದ್ದಾರೆ.
ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು "ಇದು ಅತ್ಯಂತ ಆಶ್ಚರ್ಯಕರವಾಗಿದೆ. ಅವರ ಮನೆಯಲ್ಲಿ ಯಾವುದೇ ಕೌಟುಂಬಿಕ ಕಲಹವಿರಲಿಲ್ಲ. ಪದ್ಮಪ್ರಿಯಾ ಅವರ ನಡತೆಯನ್ನು ಅನುಮಾನಿಸುವುದು ಸರಿಯಲ್ಲ. ಅಕ್ಕ ಆ ರೀತಿಯ ಯಾವುದೇ ಹೆಜ್ಜೆ ಇಟ್ಟಿರಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ.
ಅವರು ಅತುಲ್ ಜತೆ ತೆರಳಿದ್ದರು ಎಂದು ಹೇಳಲಾಗುತ್ತಿದೆ, ಇದರಲ್ಲಿ ನಮಗೆ ನಂಬಿಕೆಯಿಲ್ಲ ಎಂದಿರುವ ಅವರು ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
|