ಉಡುಪಿ ಶಾಸಕ ರಘುಪತಿ ಭಟ್ ಪತ್ನಿ ಪದ್ಮಪ್ರಿಯಾ ಆತ್ಮಹತ್ಯೆ ಪ್ರಕರಣವನ್ನು ಮುಚ್ಚಿ ಹಾಕು ಅವಶ್ಯಕತೆ ಬಿಜೆಪಿ ಸರ್ಕಾರಕ್ಕೆ ಇಲ್ಲ ಎಂದು ಗೃಹಸಚಿವ ವಿ.ಎಸ್. ಆಚಾರ್ಯ ಹೇಳಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದ ಕುರಿತು ಸಂಪೂರ್ಣ ತನಿಖೆಯಾಗಲಿದೆ. ಹಾಗೆಯೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತಾದ ವಿವರಗಳನ್ನು ನೀಡಲು ನಿರಾಕರಿಸಿದ ಅವರು, ಈ ಬಗ್ಗೆ ಸಂಪೂರ್ಣ ತನಿಖೆಯಾದ ಮೇಲಷ್ಟೇ ಮಾಹಿತಿ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ನುಡಿದರು.
ಇದೇ ವೇಳೆ ಪ್ರಕರಣದ ಕುರಿತು ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ಪರಸ್ಪರ ಗೊಂದಲ ಹೇಳಿಕೆಗಳನ್ನು ನೀಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಆಯಾ ಸಂದರ್ಭಗಳಲ್ಲಿ ಬಂದಿರುವ ಮಾಹಿತಿಗಳನ್ನು ಆಧರಿಸಿ ಈ ಹೇಳಿಕೆ ನೀಡಲಾಗಿತ್ತು ಎಂದು ಸ್ಪಷ್ಟ ಪಡಿಸಿದರು.
|