ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು, ಪ್ರಥಮ ದರ್ಜೆ ಸಹಾಯಕ ಹುದ್ದೆಗಳಿಗೆ ಇತ್ತೀಚಿಗೆ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು, ಪರೀಕ್ಷೆ ಆರಂಭಕ್ಕೆ ಮೊದಲೇ ಬಹಿರಂಗಗೊಂಡಿರುವುದಾಗಿ ಆರೋಪಿಸಿರುವ ಕರ್ನಾಟಕ ಪದವೀಧರರ ವೇದಿಕೆಯು, ಕೂಡಲೇ ಮರು ಪರೀಕ್ಷೆ ನಡೆಸುವಂತೆ ಆಗ್ರಹಿಸಿದೆ.
ನಗರದ ಗಾಂಧಿ ಪ್ರತಿಮೆ ಎದುರು ಮಂಗಳವಾರ ಪ್ರತಿಭಟನೆ ನಡೆಸಿದ ವೇದಿಕೆಯ ಕಾರ್ಯಕರ್ತರು ಆಯೋಗದ ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.
"ಬೆಂಗಳೂರು, ಧಾರವಾಡ, ಚಿತ್ರದುರ್ಗ, ಬೀದರ್ ಸೇರಿದಂತೆ ಹಲವಾರು ಪರೀಕ್ಷಾ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಬಯಲುಗೊಂಡಿರುವ ಕುರಿತು ವರದಿಗಳು ಬಂದಿವೆ. ಭ್ರಷ್ಟ ಅಧಿಕಾರಿಗಳು ಅಭ್ಯರ್ಥಿಗಳ ಜತೆ ಕೈ ಜೋಡಿಸಿ ಈ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕಿದೆ" ಎಂದು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಸರಕಾರ ಯಾವುದೇ ನೆಪ ಹೇಳದೆ ಮರು ಪರೀಕ್ಷೆ ನಡೆಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಸರಕಾರವನ್ನು ಎಚ್ಚರಿಸಿದರು.
|