ಉದ್ಯಾನನಗರಿಯ ಸಮಗ್ರ ಅಭಿವೃದ್ದಿ ಬಗ್ಗೆ ಕೈಗೊಳ್ಳಬೇಕಾಗಿರುವ ಯೋಜನೆಗಳ ಕುರಿತು 13 ಇಲಾಖೆಗಳ ಅಧಿಕಾರಿಗಳ ಹಾಗೂ ಸಚಿವರ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚರ್ಚೆ ನಡೆಸಿದ್ದಾರೆ.
ಟ್ರಾಫಿಕ್, ವಸತಿ, ನೀರು ಸೇರಿದಂತೆ ಹಲವು ಮೂಲ ಸೌಕರ್ಯಗಳ ಕೊರತೆ ನಗರದಲ್ಲಿ ಕಂಡು ಬಂದಿರುವ ಸಮಸ್ಯೆಗಳಿಗೆ ಗಮನಹರಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಬಿಡಿಎ, ಬಿಬಿಎಂಪಿ, ಜಲಮಂಡಳಿ ಸೇರಿದಂತೆ ನಗರದ ಅಭಿವೃದ್ದಿ ಕುರಿತು ನಾನಾ ಇಲಾಖೆಗಳು ರೂಪಿಸಿರುವ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಲು ಸರಕಾರದಿಂದ ಎಲ್ಲಾ ಅಗತ್ಯ ನೆರವು, ಸಹಕಾರ ಕೊಡುವುದಾಗಿ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದರು.
ಮೆಟ್ರೋ ರೈಲು ಯೋಜನೆ ಕಾಮಗಾರಿಯನ್ನು ಚುರುಕುಗೊಳಿಸಲು ಹಾಗೂ ಬಿಡಿಎ ಕಾರ್ಯಗತಗೊಳಿಸುತ್ತಿರುವ ಹೊರವರ್ತುಲ ರಸ್ತೆ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಸಮಸ್ಯೆ ಹಾಗೂ ಅಭಿವೃದ್ದಿ ಯೋಜನೆಗಳ ಪ್ರಗತಿ ಪರೀಶೀಲನೆ ನಡೆಸಲು ಪ್ರತಿ ಎರಡು ತಿಂಗಳಿಗೊಮ್ಮೆ ಎಲ್ಲಾ ಇಲಾಖೆ ಹಾಗೂ ಸಂಸ್ಥೆಗಳ ಸಭೆ ನಡೆಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
|