ಮುಖ್ಯ ಪುಟ  ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರೈತ ಆತ್ಮಹತ್ಯೆಗೆ ಸರಕಾರ ಹೊಣೆ: ಕಾಂಗ್ರೆಸ್ ಆರೋಪ  Search similar articles
ರಸಗೊಬ್ಬರ ಸಿಗದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯನ್ನು ಪ್ರತಿಪಕ್ಷ ರಾಜಕೀಯವಾಗಿ ಬಳಸಿಕೊಂಡಿದೆ.

ಈ ಘಟನೆಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ. ರೈತರ ಹೆಸರಿನಲ್ಲಿ ಜಪ ಮಾಡಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸರ್ಕಾರ ಮತ್ತೊಮ್ಮೆ ವಿಫಲವಾಗಿದೆ ಎಂದು ಕೆಪಿಸಿಸಿ ವಕ್ತಾರ ವಿ.ಎಸ್. ಉಗ್ರಪ್ಪ ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರ 20 ದಿನಗಳನ್ನು ಪೂರೈಸಿದರೂ, ಇದುವರೆಗೆ ರೈತರ ಸಾಮಾನ್ಯ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವಲ್ಲಿ ಪ್ರಮಾಣಿಕ ಪ್ರಯತ್ನ ನಡೆಸಿಲ್ಲ ಎಂದು ಅವರು ದೂರಿದ್ದಾರೆ.

ಕಳೆದ 15 ದಿನಗಳಿಂದ ರಾಜ್ಯದಲ್ಲಿ ರಸಗೊಬ್ಬರ, ಬಿತ್ತನೆ ಬೀಜಕ್ಕಾಗಿ ರೈತರು ಹೋರಾಟ ನಡೆಸುತ್ತಿದ್ದರೂ ಪರಿಹಾರ ಮಾತ್ರ ಸಿಗುತ್ತಿಲ್ಲ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಉಗ್ರಪ್ಪ ಅವರು ಆರೋಪಿಸಿದ್ದಾರೆ.
ಮತ್ತಷ್ಟು
ಶಂಕಿತ ಉಗ್ರರ ನ್ಯಾಯಾಂಗ ಬಂಧನ ವಿಸ್ತರಣೆ
ರೈತ ಆತ್ಮಹತ್ಯೆ: ಪರಿಹಾರಕ್ಕೆ ಒತ್ತಾಯ
ರೈತ ಆತ್ಮಹತ್ಯೆಗೆ ಸರಕಾರದ ಬೇಜವಾಬ್ದಾರಿ ಕಾರಣ
ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಇಲ್ಲ: ಕಾಗೇರಿ
ಅಭಿವೃದ್ಧಿ ಕಾಮಗಾರಿ ಪೂರೈಕೆಗೆ ಕಟ್ಟಾ ತಾಕೀತು
ಅತುಲ್: ಹೇಬಿಯಸ್ ಕಾರ್ಪಸ್ ವಾಪಾಸ್